24ರಂದು ವಿಶ್ವ ಕ್ಷಯರೋಗ ದಿನಾಚರಣೆ
ಶಿವಮೊಗ್ಗ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕ್ಷಯರೋಗ ವಿಭಾಗ ಹಾಗೂ ಪರಿಷ್ಕೃತ ರಾಷ್ಟ್ರೀಯ ಕ್ಷಯರೋಗ ನಿಯಂತ್ರಣ ಕಾರ್ಯಕ್ರಮದ ಆಶ್ರಯದಲ್ಲಿ ಮಾ.24 ರಂದು ಬೆಳಗ್ಗೆ 9 ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ವಿಶ್ವ ಕ್ಷಯರೋಗ ದಿನಾಚರಣೆಯ ಜಾಥಾ ಕಾರ್ಯಕ್ರಮ ನಡೆಯಲಿದೆ. ಜಿಲ್ಲಾಧಿಕಾರಿ ವಿಪುಲ್ ಬನ್ಸಲ್ ಹಾಗೂ ಜಿಲ್ಲಾ ಪಂಚಾಯತ್ ಸಿಇಒ ಜಾಥಾಕ್ಕೆ ಚಾಲನೆ ನೀಡುವರು. ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ, ಆರೋಗ್ಯ ಇಲಾಖೆಯ ಸಿಬ್ಬಂದಿ ಹಾಗೂ ವಿವಿಧ ನರ್ಸಿಂಗ್ ಹಾಗೂ ಪ್ಯಾರಾ ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳು ಪಾಲ್ಗೊಳ್ಳುವರೆಂದು ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.