ಜೆಡಿಎಸ್ ಅಭ್ಯರ್ಥಿ ಗೀತಾ ಶಿವಣ್ಣ ನಾಮಪತ್ರ ಇಂದು
ಶಿವಮೊಗ್ಗ: ಕುಮಾರ್ ಬಂಗಾರಪ್ಪ ಅವರ ಆರೋಪಗಳಿಂದ ಆಗಿರುವ ಹಾನಿಯನ್ನು ಸರಿಪಡಿಸಿಕೊಳ್ಳಲು ಜಾತ್ಯತೀತ ಜನತಾದಳವು ನಾಮಪತ್ರ ಸಲ್ಲಿಕೆ ಕಾರ್ಯಕ್ರಮ ಸಂದರ್ಭದಲ್ಲಿ ಭಾರಿ ಬಲಪ್ರದರ್ಶನಕ್ಕೆ ತಯಾರಿ ನಡೆಸಿದೆ. ಜೆಡಿಎಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಅವರು ಭಾನುವಾರವೇ ಜಿಲ್ಲೆಗೆ ಆಗಮಿಸಿದ್ದು, ಶಿಕಾರಿಪುರ ಹಾಗೂ ಸೊರಬದಲ್ಲಿ ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು. ಭಾನುವಾರ ಬೆಳಿಗ್ಗೆ 10 ಗಂಟೆಗೆ ಶಿವಮೊಗ್ಗದ ರಾಮಣ್ಣ ಶ್ರೇಷ್ಠಿ ಪಾರ್ಕ್ ಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಗಾಂಧಿ ಬಜಾರ್, ಅಮೀರ್ ಅಹ್ಮದ್ ವೃತ್ತ, ನೆಹರೂ ರಸ್ತೆ, ಬಾಲರಾಜ ಅರಸ್ ರಸ್ತೆ, ಮಹಾವೀರ ವೃತ್ತದ ಮೂಲಕ ಮೆರವಣಿಗೆಯಲ್ಲಿ ಜಿಲ್ಲಾ ಚುನಾವಣಾಧಿಕಾರಿ ಕಚೇರಿಗೆ ಆಗಮಿಸುವರು. ಈ ಕಾರ್ಯಕ್ರಮದಲ್ಲಿ ಚಿತ್ರನಟ ಶಿವರಾಜಕುಮಾರ್, ಜೆಡಿಎಸ್ ಶಾಸಕರಾದ ಮಧು ಬಂಗಾರಪ್ಪ, ಎಂ.ಜೆ. ಅಪ್ಪಾಜಿಗೌಡ, ಶಾರದಾ ಪೂರ್ಯಾನಾಯ್ಕ್ ಸೇರಿದಂತೆ ಹಲವು ಮುಖಂಡರು ಭಾಗವಹಿಸುವರು.
--