ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ಕಳಸವಳ್ಳಿ- ಅಂಬಾರಗೊಡ್ಲು ಸೇತುವೆ ನಿರ್ಮಾಣಕ್ಕೆ ಪ್ರಯತ್ನ

Lingaraj Badiger
Updated On : 26 Mar 2014, 11:55 am

ಕ.ಪ್ರ.ವಾರ್ತೆ, ಸಾಗರ, ಮಾ.25
ನಾಡಿಗೆ ಬೆಳಕು ನೀಡಲು ತಮ್ಮ ಸರ್ವಸ್ವವನ್ನೇ ತ್ಯಾಗ ಮಾಡಿರುವ ಹಿನ್ನೀರಿನ ಜನರಿಗೆ ಮೂಲಭೂತ ಸೌಲಭ್ಯ ಒದಗಿಸಲು ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಬೇಕಾಯಿತು. 5 ದಶಕಗಳ ಕಾಲ ಆಡಳಿತ ನಡೆಸಿದ ಯಾವ ಸರ್ಕಾರಗಳು ಹಿನ್ನೀರಿನ ಜನರ ಸಮಸ್ಯೆ ಏನು ಎಂದು ಕನಿಷ್ಠ ತಿಳಿದುಕೊಳ್ಳುವ ಪ್ರಯತ್ನ ಮಾಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ, ಶಿವಮೊಗ್ಗ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ಎಸ್. ಯಡಿಯೂರಪ್ಪ ಹೇಳಿದರು.
ತಾಲೂಕಿನ ತುಮರಿಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಚುನಾವಣಾ ಪ್ರಚಾರ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ನಾನು ಸಿಎಂ ಆಗಿದ್ದ ಅವಧಿಯಲ್ಲಿ ಈ ಭಾಗದ ಜನರ ಒತ್ತಾಸೆ ಅರ್ಥ ಮಾಡಿಕೊಂಡು ತುಮರಿ ಸೇತುವೆ ನಿರ್ಮಾಣಕ್ಕೆ ಬಜೆಟ್ಟಿನಲ್ಲಿ ಹಣ ಮೀಸಲಿರಿಸಿದ್ದೆ. ಕಾರಣಾಂತರದಿಂದ ಸೇತುವೆ ನಿರ್ಮಾಣ ಸಾಧ್ಯವಾಗಿಲ್ಲ ಎಂದರು.
ಸೇತುವೆ ಅವಶ್ಯ:  ಹಿನ್ನೀರಿನ ಜನರ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಬೇಕಾದರೆ ಸೇತುವೆ ನಿರ್ಮಾಣ ಆಗಬೇಕೆ ವಿನಃ ಹೆಚ್ಚುವರಿ ಲಾಂಚ್ ಬಿಡುವುದರಿಂದ ಜನರ ಆಶಯ ಈಡೇರುವುದಿಲ್ಲ. ಎಂದರು.
ಕಾಂಗ್ರೆಸ್ ಪಕ್ಷದಿಂದ ಕೆ.ಸಿ.ರಾಮಚಂದ್ರ, ರಘುಪತಿ ಎಚ್.ಆರ್. ಸೇರಿದಂತೆ 50ಕ್ಕೂ ಹೆಚ್ಚು ಜನರು ಬಿಜೆಪಿ ಸೇರ್ಪಡೆಗೊಂಡರು.
ರಾಜ್ಯಸಭಾ ಸದಸ್ಯ ಆಯನೂರು ಮಂಜುನಾಥ್, ಮಾಜಿ ಸಚಿವ ಎಚ್.ಹಾಲಪ್ಪ, ಬಿ.ಆರ್. ಜಯಂತ್, ಚೇತನರಾಜ್ ಕಣ್ಣೂರು, ಟಿ.ಡಿ.ಮೇಘರಾಜ್, ಪ್ರಸನ್ನ ಕೆರೆಕೈ, ಮಂಜಯ್ಯ ಜೈನ್, ಓಂಕಾರ್ ಜೈನ್ ಹಾಜರಿದ್ದರು. ನಂತರ ಬಿ.ಎಸ್. ಯಡಿಯೂರಪ್ಪ ಅವರು ಶ್ರೀಸಿಗಂಧೂರೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement