ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ಮತದಾನದ ಪರಿಜ್ಞಾನವಿರಲಿ: ಎಸಿ

Rashmi Kasaragodu
Updated On : 31 Mar 2014, 1:57 am

ಸಾಗರ: ಯುವಜನತೆ ತಮ್ಮ ರಾಜಕೀಯ ಜವಾಬ್ದಾರಿ ಅರ್ಥ್ಥಮಾಡಿಕೊಂಡು ಮತದಾನದ ಮೂಲಕ ಪ್ರಜಾಪ್ರಭುತ್ವದ ಮೌಲ್ಯವನ್ನು ಉಳಿಸಬೇಕು ಎಂದು ಉಪವಿಭಾಗಾಧಿಕಾರಿ ಡಾ. ಉದಯಕುಮಾರ್ ಶೆಟ್ಟಿ ಹೇಳಿದರು.
ಇಲ್ಲಿನ ತಾಲೂಕು ಆಡಳಿತ ಹಾಗೂ ಶ್ರೀಮತಿ ಇಂದಿರಾಗಾಂಧಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಶನಿವಾರ ಹಮ್ಮಿಕೊಳ್ಳಲಾಗಿದ್ದ ಬೃಹತ್ ಮತದಾನ ಅರಿವು ಜಾಥಾ ಹಾಗೂ ಸಹಿ ಸಂಗ್ರಹ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ತಹಸೀಲ್ದಾರ್ ಎಚ್.ಭಾಗ್ಯಲಕ್ಷ್ಮೀ ಮಾತನಾಡಿ, 2014ರ ಲೋಕಸಭಾ ಚುನಾವಣೆಯಲ್ಲಿ ಶೇ.100ರಷ್ಟು ಮತದಾನ ನಡೆಯಬೇಕು ಎನ್ನುವುದು ತಾಲೂಕು ಆಡಳಿತದ ಉದ್ದೇಶವಾಗಿದೆ. ಇದು ಸಾಕಾರಗೊಳ್ಳಬೇಕಾದರೆ ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಬೇಕು ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಡಾ.ಅಶೋಕ ಡಿ. ರೇವಣಕರ್, ಉತ್ತಮ ಪ್ರತಿನಿಧಿಗಳ ಆಯ್ಕೆಗೆ ಯಾವುದೇ ಆಮಿಷಗಳಿಗೆ ಬಲಿಯಾಗದೆ ಮತದಾನ ಮಾಡಬೇಕು. ಯುವಜನಾಂಗ ಪ್ರಜಾಪ್ರಭುತ್ವದ ಮೌಲ್ಯ ಉಳಿಸುವ ನಿಟ್ಟಿನಲ್ಲಿ ತಮ್ಮ ಹಂತದಲ್ಲಿ ಪ್ರಯತ್ನ ನಡೆಸಬೇಕು ಎಂದರು.
ತಹಸೀಲ್ದಾರ್ ಗಣೇಶರಾವ್, ಸಹ ಪ್ರಾಧ್ಯಾಪಕ ಡಾ.ಕೆ.ಪ್ರಭಾಕರ್‌ರಾವ್, ಪ್ರೊ. ಎ.ಗಣೇಶಭಟ್, ಎನ್.ಎಸ್.ಎಸ್. ಅಧಿಕಾರಿ ಡಾ. ಓ.ಜಿ. ಬಸವನಗೌಡ, ಎಸ್. ಉಮಾಪತಿ, ಬಾಲಚಂದ್ರ ಜಿ. ಹೆಗಡೆ, ಪ್ರೊ. ಸಿ.ಎನ್. ಹರ್ಷವರ್ಧನ್ ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement