ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ಪತಂಜಲಿ ಯೋಗ ಕಲಾ ಮಂದಿರದಲ್ಲಿ ಕಾರ್ಯಾಗಾರ

Rashmi Kasaragodu
Updated On : 2 May 2014, 11:10 am

ಶಿವಮೊಗ್ಗ: ಸಂಗೊಳ್ಳಿ ರಾಯಣ್ಣ ಯುವ ಘರ್ಜನೆ ಸ್ವಯಂಸೇವಕರಿಗೆ ಪತಂಜಲಿ ಯೋಗ ಮತ್ತು ಪ್ರಕೃತಿ ಸಂಸ್ಥೆ, ಶ್ರೀಕನಕದಾಸರ ಅಧ್ಯಯನ ಕೇಂದ್ರ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಆಶ್ರಯದಲ್ಲಿ ಮೇ 4ರ ಸಂಜೆ 3ಗಂಟೆಗೆ ಹೊಸಮನೆಯ ಪತಂಜಲಿ ಯೋಗ ಕಲಾ ಮಂದಿರದಲ್ಲಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ.
     ಶ್ರೀ ಪ್ರಸನ್ನನಾಥ ಸ್ವಾಮೀಜಿ, ಶ್ರೀ ಈಶ್ವರಾನಂದಪುರಿ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಎಂ. ಈಶ್ವರಪ್ಪ ನವುಲೆ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಪನ್ಮೂಲ ವ್ಯಕ್ತಿಯಾಗಿ ನಿಕೇತ್‌ರಾಜ್, ರಾಜ್‌ಶೇಖರ್, ರಾಜುಮೌರ್ಯ, ಪುನೀತ್, ದೊಡ್ಡಯ್ಯ ಭಾಗವಹಿಸುವರು. ಆ.15ರಂದು ಬೆಳಗಾವಿಯ ನಂದಘಡದಲ್ಲಿ ಸಂಗೊಳ್ಳಿ ರಾಯಣ್ಣನವರ ಜನ್ಮದಿನಾಚರಣೆಯಲ್ಲಿ 20 ಸಾವಿರ ಸ್ವಯಂ ಸೇವಕರು ಸೇರುವ ಗುರಿಯನ್ನು ಇಟ್ಟುಕೊಂಡು ಪ್ರತಿ ಜಿಲ್ಲೆ, ತಾಲೂಕುಗಳಲ್ಲಿ ಇಂತಹ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗುತ್ತಿದೆ ಆಯೋಜಕರು ತಿಳಿಸಿದ್ದಾರೆ.


ಶ್ರೀನಾಗಸುಬ್ರಹ್ಮಣ್ಯ ದೇವಸ್ಥಾನ ವಾರ್ಷಿಕೋತ್ಸವ
ಶಿವಮೊಗ್ಗ: ನಗರದ ಸ್ವಾಮಿ ವಿವೇಕಾನಂದ ಬಡಾವಣೆಯ ಶ್ರೀನಾಗಸುಬ್ರಹ್ಮಣ್ಯ ದೇವಸ್ಥಾನದ ಐದನೇ ವಾರ್ಷಿಕೋತ್ಸವ ಮೇ 5ರಂದು ನಡೆಯಲಿದೆ. ಅಂದು ಬೆಳಗ್ಗೆ ಕುಲದೇವತಾ ಪ್ರಾರ್ಥನೆ, ಗುರು ಗಣಪತಿ ಪೂಜೆ, ಅಷ್ಟೋತರ ಸಹಿತ ಬ್ರಹ್ಮ ಕಲಶಸ್ಥಾಪನೆ ಹಾಗೂ ಕುಂಭಾಭಿಷೇಕ, ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಮಧ್ಯಾಹ್ನ 12.30ಕ್ಕೆ ಮಹಾಮಂಗಳಾರತಿ ಪ್ರಸಾದ ವಿನಿಯೋಗವಿರುತ್ತದೆ. ಸಂಜೆ 6 ಗಂಟೆಗೆ ನಾಗದೋಷ ನಿವಾರಣಾ ಆಶ್ಲೇಷ ಬಲಿ ನಡೆಯಲಿದೆ ಎಂದು ದೇವಸ್ಥಾನ ಸೇವಾ ಸಮಿತಿ ತಿಳಿಸಿದೆ.
ಶಕುಂತಲಾ ವೈಕುಂಠ ಸಮಾರಾಧನೆ ಇಂದು
ಸೊರಬ:  ಶಕುಂತಲಾ ಬಂಗಾರಪ್ಪ ಅವರ ವೈಕುಂಠ ಸಮಾರಾಧನೆಯನ್ನು ತಾಲೂಕಿನ ಕುಬಟೂರಿನ ಅವರ ಸ್ವಗೃಹದಲ್ಲಿ ಮೇ 2 ರಂದು ಶುಕ್ರವಾರ ಮಧ್ಯಾಹ್ನ 12.30 ಗಂಟೆಗೆ ನೆರವೇರಿಸಲಾಗುವುದು ಎಂದು ಶಾಸಕ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಕಳಸಾರೋಹಣ ಇಂದು
ಶಿವಮೊಗ್ಗ: ತಾಲೂಕಿನ ಕಲ್ಲಗಂಗೂರು ವೀರಾಂಜನೇಯ ಸ್ವಾಮಿ ನೂತನ ದೇವಸ್ಥಾನದ ಕಳಸಾರೋಹಣ ಸಮಾರಂಭ ಮೇ 2ರಂದು ನಡೆಯಲಿದೆ. ಹಿರೇಕಲ್ಮಠ ಒಡೆಯರ್ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ಚಿತ್ರದುರ್ಗದ ಬೋವಿ ಗುರುಪೀಠದ ನಿರಂಜನ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಅಂದು ಬೆಳಿಗ್ಗೆ ದೇವಸ್ಥಾನದ ಗೃಹಪ್ರವೇಶ, ಕಳಸಾರೋಹಣ, ಗಣಹೋಮ, ರುದ್ರಾಭಿಷೇಕ, ಮಹಾಮಂಗಳಾರತಿ ಇದ್ದು, ಮಧ್ಯಾಹ್ನ 12.30ಕ್ಕೆ ಶ್ರೀಗಳು ಆಶೀರ್ವಚನ ನೀಡಲಿದ್ದಾರೆ. ಕಾರ್ಯಕ್ರಮದಲ್ಲಿ ಭಕ್ತರು ಪಾಲ್ಗೊಳ್ಳುವಂತೆ ದೇವಸ್ಥಾನ ಸಮಿತಿ ಕೋರಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement