ಲೋಕಾಯುಕ್ತರಿಂದ ಅಹವಾಲು ಸ್ವೀಕಾರ
ಶಿವಮೊಗ್ಗ: ಲೋಕಾಯುಕ್ತ ಪೊಲೀಸ್ ವಿಭಾಗದ ಅಧಿಕಾರಿಗಳು ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ. ಮೇ 8ರಂದು ಬೆಳಗ್ಗೆ 11ರಿಂದ 1 ರವರೆಗೆ ಹೊಸನಗರ ತಾಲೂಕಿನ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ, ಮಧ್ಯಾಹ್ನ 3 ರಿಂದ 5 ಗಂಟೆವರೆಗೆ ತೀರ್ಥಹಳ್ಳಿ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ, ಮೇ 15ರಂದು ಬೆಳಿಗ್ಗೆ 11 ರಿಂದ 1ರವರೆಗೆ ಸಾಗರ ತಾ.ನ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ, ಮಧ್ಯಾಹ್ನ 3 ರಿಂದ 5ಗಂಟೆವರೆಗೆ ಸೊರಬ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ, ಮೇ 22ರಂದು ಬೆಳಿಗ್ಗೆ 11 ರಿಂದ 1 ರವರೆಗೆ ಶಿಕಾರಿಪುರ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ, ಮಧ್ಯಾಹ್ನ 3 ರಿಂದ 5ಗಂಟೆವರೆಗೆ ಭದ್ರಾವತಿ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ, ಮೇ 29ರಂದು ಬೆಳಿಗ್ಗೆ 11 ರಿಂದ 1ರವರೆಗೆ ಶಿವಮೊಗ್ಗ ತಾಲೂಕು ಸೂಗೂರು ಗ್ರಾಮಪಂಚಾಯ್ತಿ ಕಾರ್ಯಾಲಯದಲ್ಲಿ ಹಾಜರಿದ್ದು, ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸುವರು