ಖಾತ್ರಿ: ಮುತುವರ್ಜಿ ಅಗತ್ಯ
ಕ.ಪ್ರ.ವಾರ್ತೆ ್ಣ ಸಾಗರ ್ಣ ಮೇ 7
ಉದ್ಯೋಗ ಖಾತ್ರಿ ಯಶಸ್ವಿಗೊಳ್ಳಬೇಕಾದರೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಹೆಚ್ಚು ಮುತುವರ್ಜಿ ವಹಿಸಬೇಕು. ಕೆಲಸ ಮಾಡುವವರಿಗೆ ನೀವು ನೀಡುವ ಕನಿಷ್ಠ ಪ್ರೋತ್ಸಾಹ ಅವರಲ್ಲಿ ಖಾತ್ರಿ ಯೋಜನೆಯಲ್ಲಿ ತೊಡಗಿಕೊಳ್ಳುವಂತೆ ಪ್ರೇರೇಪಿಸಬೇಕು ಎಂದು ವಿಧಾನಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ಹೇಳಿದರು.
ತಾಲೂಕಿನ ಯಡಜಿಗಳೆಮನೆ ಗ್ರಾಮ ಪಂಚಾಯಿತಿಯಲ್ಲಿ ಬುಧವಾರ ವಿವಿಧ ಯೋಜನೆಗಳ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಉದ್ಯೋಗ ಖಾತ್ರಿ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸಂಬಂಧಪಟ್ಟಂತೆ ಹೊಸದೊಂದು ನೀತಿ ರಾಜ್ಯಾದ್ಯಂತ ರೂಪಿಸುವ ನಿಟ್ಟಿನಲ್ಲಿ ಶೀಘ್ರದಲ್ಲಿಯೆ ಕ್ರಮ ಕೈಗೊಳ್ಳಲಾಗುವುದು ಎಂದರು.
ನಿವೇಶನರಹಿತರಿಗೆ ನಿವೇಶನ ಕಲ್ಪಿಸುವ ನಿಟ್ಟಿನಲ್ಲಿ ಯೋಜನೆ ರೂಪಿಸಲಾಗಿದೆ. ಬಸವ ಇಂದಿರಾ ಆವಾಸ್, ಆಶ್ರಯ ನಿವೇಶನ ಹಂಚಿಕೆ ಕಾರ್ಯ ಪ್ರಗತಿಯಲ್ಲಿದ್ದು, 2013- 14ನೇ ಸಾಲಿನಲ್ಲಿ ರಾಜ್ಯ ಸರ್ಕಾರ ತಾಲೂಕಿಗೆ 1200 ಮನೆ ನೀಡಿದ್ದು, ಹೆಚ್ಚುವರಿಯಾಗಿ 500 ಮನೆ ನೀಡಿದೆ. ಒಟ್ಟು 2000 ಮನೆ ಹಂಚುವ ಗುರಿ ಹಾಕಿಕೊಳ್ಳಲಾಗಿದ್ದು, ಪ್ರತಿ ಪಂಚಾಯಿತಿಗೆ 30 ರಿಂದ 45 ಮನೆ ಹಂಚುವ ಗುರಿ ಹೊಂದಲಾಗಿದೆ. ಇಂದಿರಾ ಆವಾಸ್ ಯೋಜನೆಯಡಿ ಮನೆ ನಿರ್ಮಿಸಿಕೊಳ್ಳಲು 1.20 ಲಕ್ಷ ನೀಡಲಾಗುತ್ತಿದೆ ಎಂದು ತಿಳಿಸಿದರು.
ಜಿಪಂ ಸದಸ್ಯೆ ಪದ್ಮಾವತಿ ಚಂದ್ರಕುಮಾರ್, ತಾಪಂ ಮಾಜಿ ಅಧ್ಯಕ್ಷ ಮಲ್ಲಿಕಾರ್ಜುನ ಹಕ್ರೆ, ಹಾಲಿ ಸದಸ್ಯ ಮಹಾಬಲೇಶ್ವರ ಕುಗ್ವೆ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಕೃಷ್ಣಮೂರ್ತಿ, ಸದಸ್ಯರಾದ ಶ್ರೀನಿವಾಸ್ ಶೇರೆಗಾರ್, ಕೋಮಲ, ಪಿಡಿಒ ಬಾಲಸುಬ್ರಹ್ಮಣ್ಯ ಸೇರಿದಂತೆ ಇತರರು ಇದ್ದರು.