ನೀನಾಸಂ ರಂಗ ಶಿಕ್ಷಣಕ್ಕೆ ಅರ್ಜಿ ಆಹ್ವಾನ
ಬೆಂಗಳೂರು: ಸಾಗರ ತಾಲೂಕು ಹೆಗ್ಗೋಡಿನ ಪ್ರತಿಷ್ಠಿತ ನೀನಾಸಂ ರಂಗ ಶಿಕ್ಷಣ ಕೇಂದ್ರವು 2014-15ನೇ ಸಾಲಿನ ರಂಗ ಶಿಕ್ಷಣಕ್ಕೆ ಅರ್ಜಿ ಆಹ್ವಾನಿಸಿದೆ.
ಕನಿಷ್ಟ ಎಸ್ಸೆಸ್ಸೆಲ್ಸಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಪದವೀಧರರಿಗೆ ಆದ್ಯತೆ ಇದ್ದು, ರಂಗಭೂಮಿಯಲ್ಲಿ ಸ್ವಲ್ಪ ಪ್ರಮಾಣದಲ್ಲಾದರೂ ಅನುಭವ ಇರಬೇಕು. ಅರ್ಜಿ ಸಲ್ಲಿಸಿ ಅರ್ಹತೆ ಪಡೆದುಕೊಂಡ ವಿದ್ಯಾರ್ಥಿಗಳಿಗೆ ಊಟ, ವಸತಿ ವ್ಯವಸ್ಥೆ ಇದ್ದು, ಹದಿನೈದು ಮಂದಿಗೆ ವಿದ್ಯಾರ್ಥಿ ವೇತನ ದೊರೆಯಲಿದೆ. ಕೇಂದ್ರದಲ್ಲಿ ವಿದ್ಯಾರ್ಥಿಗಳಿಗೆ ರಂಗ ಕಲ್ಪನೆ, ರಂಗ ಇತಿಹಾಸ, ನಾಟಕ ಇತಿಹಾಸ, ರಂಗನಟನೆ ಸೇರಿದಂತೆ ರಂಗ ಭೂಮಿಗೆ ಸಂಬಂಧಿಸಿದ ಸೈದ್ಧಾಂತಿಕ ಹಾಗೂ ಪ್ರಾಯೋಗಿಕ ಶಿಕ್ಷಣ ನೀಡಲಾಗುತ್ತದೆ. ಪ್ರವೇಶ ಪತ್ರವನ್ನು ಪಡೆದು ಭರ್ತಿ ಮಾಡಿ, ಜೂನ್ 17ರೊಳಗೆ ನೀನಾಸಂ ರಂಗ ಶಿಕ್ಷಣ ಕೇಂದ್ರ, ಹೆಗ್ಗೋಡು, ಸಾಗರ, ಶಿವಮೊಗ್ಗ, 577417 ವಿಳಾಸಕ್ಕೆ ಕಳುಹಿಸಬೇಕು. ಜೊತೆಗೆ ಜೂನ್ 28 ಮತ್ತು 29ರಂದು ನೇರವಾಗಿ ಸಂದರ್ಶನಕ್ಕೆ ಹಾಜರಾಗಬೇಕೆಂದು ನೀನಾಸಂ ರಂಗ ಶಿಕ್ಷಣ ಕೇಂದ್ರದ ಪ್ರಕಟಣೆ ತಿಳಿಸಿದೆ. ಹೆಚ್ಚಿನ ಮಾಹಿತಿಗೆ 08183-265646ಗೆ ಸಂಪರ್ಕಿಸಬಹುದು.