ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ
ಶಿವಮೊಗ್ಗ: ಭದ್ರಾವತಿ ತಾಲೂಕಿನಲ್ಲಿ ಬಿಸಿಎಂ ಇಲಾಖಾ ಮೆಟ್ರಿಕ್‌ಪೂರ್ವ ಬಾಲಕ-ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಪ್ರಸಕ್ತ ಸಾಲಿನಲ್ಲಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಪ್ರವೇಶ ಬಯಸುವ ಅಭ್ಯರ್ಥಿಗಳು ಪರಿಶಿಷ್ಟ ಜಾತಿ, ವರ್ಗಕ್ಕೆ ಸೇರಿದವರಾಗಿರಬೇಕು. ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳಿಗೆ ವಾರ್ಷಿಕ ಆದಾಯದ ಮಿತಿ 1 ಲಕ್ಷ, ಎಸ್.ಸಿ ಮತ್ತು ಎಸ್.ಟಿ. ವರ್ಗಕ್ಕೆ ಸೇರಿದ ವಿದ್ಯಾರ್ಥಿ ಗಳಿಗೆ ವಾರ್ಷಿಕ ಆದಾಯ 2 ಲಕ್ಷ ಹಾಗೂ ಉಳಿದ ಪ್ರವರ್ಗ 2ಎ, 2ಬಿ, 3ಎ, 3ಬಿ ಗಳಿಗೆ ಸೇರಿದ ವಿದ್ಯಾರ್ಥಿಗಳಿಗೆ ವಾರ್ಷಿಕ ಆದಾಯ 44500 ಮಿತಿ ಇರುತ್ತದೆ.
ಅರ್ಹ ವಿದ್ಯಾರ್ಥಿಗಳು ಅರ್ಜಿಯನ್ನು ತಾಲೂಕು ಪಂಚಾಯಿತಿ ಭದ್ರಾವತಿ ಅಥವಾ ಸಂಬಂಧಿಸಿದ ವಿದ್ಯಾರ್ಥಿ ನಿಲಯಗಳಿಂದ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಕಳೆದ ಸಾಲಿನಲ್ಲಿ ಉತ್ತೀರ್ಣರಾದ ದೃಢೀಕೃತ ಅಂಕಪಟ್ಟಿಯೊಂದಿಗೆ ಲಗತ್ತಿಸಿ ಜೂ.10 ರೊಳಗಾಗಿ ಸಲ್ಲಿಸಬೇಕು. ವಿವರಗಳಿಗಾಗಿ ಭದ್ರಾವತಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳನ್ನು ಸಂಪರ್ಕಿಸಬಹುದು. ಅಥವಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿಸ್ತರಣಾಧಿಕಾರಿ ಅವರನ್ನು ಸಂಪರ್ಕಿಸಬೇಕು.