ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ಬಿಎಸ್‌ವೈ ಗೆಲವಿಗೆ ವಿವಿಧ ಸಂಘಟನೆಗಳ ಅಭಿನಂದನೆ

Lingaraj Badiger
Updated On : 20 May 2014, 10:45 am

ಶಿವಮೊಗ್ಗ: 16ನೇ ಲೋಕಸಭೆ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಸ್ಪರ್ಧಿಸಿ ವಿಜೇತರಾದ ಬಿ.ಎಸ್. ಯಡಿಯೂರಪ್ಪ ಅವರನ್ನು ಹವ್ಯಕ ಸಂಘ ಶಿವಮೊಗ್ಗ ಹಾಗೂ ಜಿಲ್ಲಾ ವಕೀಲರ ಸಂಘ ಅಭಿನಂಧಿಸಿದೆ.
ಪತ್ರಿಕಾ ಹೇಳಿಕೆ ನೀಡಿರುವ ಉಭಯ ಸಂಘದ ಅಧ್ಯಕ್ಷ ಅಶೋಕ್ ಜಿ. ಭಟ್, ಸುದೀರ್ಘ ಕಾಲದ ರಾಜಕೀಯ, ಸಾಮಾಜಿಕ ಕ್ಷೇತ್ರದಲ್ಲಿ ಅನುಭವ ಹೊಂದಿದ ಬಿ.ಎಸ್. ಯಡಿ ಯೂರಪ್ಪ ಅವರು ಸಂಸತ್ತಿಗೆ ಪ್ರವೇಶಿಸಿದ್ದು, ಈ ಭಾಗದ ಜನರಿಗೆ ಆಶಾಕಿರಣವಾದಂತಾಗಿದೆ. ಇವರ ಅವಧಿಯಲ್ಲಿ ಶಿವಮೊಗ್ಗ ಜಿಲ್ಲೆ ಎಲ್ಲಾ ಕ್ಷೇತ್ರದಲ್ಲೂ ಸರ್ವತೋಮುಖ ಅಭಿವೃದ್ಧಿ ಸಾಧಿಸಲು ಶ್ರಮಿಸಲಿ ಎಂದು ಆಶಿಸಿದ್ದಾರೆ.
ಅನುದಾನಿತ ಸಂಘ: ಸಂಸತ್ತಿಗೆ ಆಯ್ಕೆ ಆಗಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಶಿವಮೊಗ್ಗ ಜಿಲ್ಲಾ ಅನುದಾನಿತ ಶಿಕ್ಷಣ ಸಂಸ್ಥೆ ನೌಕರರ ಸಂಘ ಅಭಿನಂದಿಸಿದೆ. ನಿರ್ಲಕ್ಷ್ಯಕ್ಕೆ ಒಳಗಾಗಿರುವ ರಾಜ್ಯದ ಅನುದಾನಿತ ಶಿಕ್ಷಣ ಸಂಸ್ಥೆಗಳ ಪುನಶ್ಚೇತನಕ್ಕೆ ಕೇಂದ್ರದಿಂದ ಹೆಚ್ಚಿನ ಧನಸಹಾಯ ಪಡೆಯುವಲ್ಲಿ ಬಿಎಸ್‌ವೈ ಯಶಸ್ವಿಯಾಗಲೆಂದು ಸಂಘದ ಜಿಲ್ಲಾ ಗೌರವಾಧ್ಯಕ್ಷ ಡಾ. ಬಾಲಕೃಷ್ಣ ಹೆಗಡೆ ಮತ್ತು ಅಧ್ಯಕ್ಷ ಡಾ. ಕುಮಾರಸ್ವಾಮಿ ಹಾರೈಸಿದ್ದಾರೆ.

ಆಧಾರ್ ನೋಂದಣಿಗೆ ಅವಕಾಶ
ಸಾಗರ: ಇಲ್ಲಿನ ವರದಾ ರಸ್ತೆಯ ಎಸ್‌ಆರ್‌ಎಸ್ ರೈಸ್ ಮಿಲ್ ಎದುರಿನ ಜಿ.ಕೆ. ಕಾನ್ಪರೆನ್ಸ್ ಹಾಲ್‌ನ ವನಶ್ರೀ ಕಚೇರಿಯಲ್ಲಿ ಆಧಾರ್ ಕಾರ್ಡ್ ನೋಂದಾಯಿಸಲು ವಿಶೇಷವಾಗಿ ಮೂರು ದಿನಗಳ ಕಾಲಾವಕಾಶ ಕಲ್ಪಿಸಲಾಗಿದೆ. ಈತನಕ ಆಧಾರ್ ಕಾರ್ಡ್ ನೋಂದಣಿ ಮಾಡಿಸಿಕೊಳ್ಳದೆ ಇರುವವರು ಅಗತ್ಯ ದಾಖಲೆಗಳೊಂದಿಗೆ ಸೌಲಭ್ಯದ ಸದುಪಯೋಗ ಪಡೆದುಕೊಳ್ಳಬೇಕೆಂದು ವನಶ್ರೀ ಸಂಸ್ಥಾಪಕ ಎಚ್.ಪಿ. ಮಂಜಪ್ಪ ಕೋರಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement