ಮೂಲ ಸೌಲಭ್ಯಕ್ಕೆ ಆಗ್ರಹ
ಶಿವಮೊಗ್ಗ: ಪರಿಶಿಷ್ಟ ಜಾತಿ, ವರ್ಗ ಹಾಗೂ ಹಿಂದುಳಿದ ವರ್ಗದ ವಸತಿ ನಿಲಯಗಳಿಗೆ ಅಗತ್ಯ ಮೂಲಭೂತ ಸೌಲಭ್ಯ ಕಲ್ಪಿಸುವಂತೆ ಒತ್ತಾಯಿಸಿ ವಿದ್ಯಾರ್ಥಿ ಸಂಘಟನೆ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿತು.
ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆ ಅಡಿಯಲ್ಲಿ ನಡೆಸಲಾಗುತ್ತಿರುವ ಕೆಲವು ಪರಿಶಿಷ್ಟ ಜಾತಿ, ವರ್ಗ ಹಾಗೂ ಹಿಂದುಳಿದ ವರ್ಗದ ವಸತಿ ನಿಲಯಗಳಲ್ಲಿ ಅಗತ್ಯ ಮೂಲಭೂತ ಸೌಲಭ್ಯವಿಲ್ಲದೆ ವಿದ್ಯಾರ್ಥಿಗಳು ಸಂಕಷ್ಟ ಎದುರಿಸುತ್ತಿದ್ದಾರೆ.
ಸರ್ಕಾರದಿಂದ ನಿಯಮಾನುಸಾರ ಅನುದಾನ ತಲುಪುತ್ತಿದ್ದರೂ ಕೆಲವು ಅಧಿಕಾರಿಗಳು ಹಾಗೂ ರಾಜಕೀಯ ವ್ಯಕ್ತಿಗಳಿಂದಾಗಿ ಸಮಸ್ಯೆ ತಲೆದೋರಿದೆ.
ವಿದ್ಯಾರ್ಥಿ ನಿಲಯಗಳಲ್ಲಿ ಶುದ್ಧ ಕುಡಿವ ನೀರು, ಶೌಚಾಲಯ, ಊಟ ಇನ್ನಿತರ ಸೌಲಭ್ಯದಲ್ಲಿ ಅವ್ಯವಸ್ಥೆ ಕಂಡುಬಂದಿದೆ ಎಂದು ಆರೋಪಿಸಿದರು.
ಮನವಿ ನೀಡುವ ಸಂದರ್ಭದಲ್ಲಿ ಸಂಘಟನೆ ರಾಜ್ಯಾಧ್ಯಕ್ಷ ವಿನಯ್, ರಾಜಾವತ್, ಅನಿಲಲ್ಕುಮಾರ್, ಯು.ಸಿ.ರವಿ ಮತ್ತಿತರರು ಉಪಸ್ಥಿತರಿದ್ದರು.