ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ವರದಕ್ಷಿಣೆ ಕಿರುಕುಳ: ನೇಣಿಗೆ ಶರಣು

Rashmi Kasaragodu
Updated On : 26 May 2014, 10:48 am

ಶಿವಮೊಗ್ಗ: ಸಂತೇಕಡೂರು ಸಮೀಪದ ಹಾರೋಘಟ್ಟ ಗ್ರಾಮದಲ್ಲಿ ವರದಕ್ಷಿಣೆ ಕಿರುಕುಳದಿಂದ ಮನನೊಂದ ಗೃಹಿಣಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಒಂದು ತಿಂಗಳ ಹಿಂದೆ ವಿವಾಹವಾಗಿದ್ದ ನಾಗಮಣಿ (25) ನೇಣಿಗೆ ಶರಣಾದವರಾಗಿದ್ದಾರೆ. ಈಕೆ ಐದು ಪುಟಗಳ ಡೆತ್ ನೋಟ್ ಬರೆದಿಟ್ಟಿದ್ದಾರೆ. ತನಗೆ ಪತಿ, ಅತ್ತೆ, ಮೈದುನ ಹಾಗೂ ಸಂಬಂಧಿಯೊಬ್ಬರು ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡುತ್ತಿದ್ದರು. ಇದರಿಂದ ಮನನೊಂದು ಆತ್ಮಹತ್ಯೆಗೆ ಶರಣಾಗುತ್ತಿರುವುದಾಗಿ ಪತ್ರದಲ್ಲಿ ವಿವರಿಸಿದ್ದಾರೆ.
ಡೆತ್ ನೋಟ್ ಆಧಾರದ ಮೇಲೆ ಪತಿ ಇಂದ್ರಜಿತ್, ಅತ್ತೆ ಮಂಜಮ್ಮ, ಮೈದುನ ಪ್ರಕಾಶ್ ಹಾಗೂ ಸಂಬಂಧಿ ನಾಗರಾಜ್ ಎಂಬುವವರನ್ನು ತುಂಗಾ ನಗರ ಪೊಲೀಸರು ಬಂಧಿಸಿದ್ದು ವಿಚಾರಣೆ ನಡೆಸಿದ್ದಾರೆ.



ಆರೋಪಿಗಳ ಬಂಧನಕ್ಕೆ ಆಗ್ರಹ
ಸೊರಬ: ತಾಲೂಕು ಹಂಚಿ ಗ್ರಾಪಂ ನೀರಗಂಟಿ ಮೇಲೆ ನಡೆದ ಮಾರಣಾಂತಿಕ ಹಲ್ಲೆ ಮತ್ತು ಕೊಲೆ ಪ್ರಯತ್ನ ಮಾಡಿದ ಆರೋಪಿಗಳನ್ನು ಬಂಧಿಸಬೇಕು ಹಾಗೂ ಕುಡಿಯುವ ನೀರು ಒದಗಿಸಬೇಕು ಎಂದು ಹಂಚಿ ಗ್ರಾ.ಪಂ ವ್ಯಾಪ್ತಿಯ ಗ್ರಾಮಸ್ಥರು ಆನವಟ್ಟಿ ಪೊಲೀಸ್ ಠಾಣೆ ಎದುರು ಭಾನುವಾರ ಪ್ರತಿಭಟನೆ ನಡೆಸಿದರು.
ಪ್ರತಿಭಟನಾಕಾರರ ಸಲ್ಲಿಸಿದದ ಮನವಿ ಸ್ವೀಕರಿಸಿ ಮಾತನಾಡಿದ ಸರ್ಕಲ್ ಇನ್ಸ್‌ಪೆಕ್ಟರ್ ಡಿ.ನಾಗರಾಜ್ ಹಾಗೂ ಆನವಟ್ಟಿ ಪೊಲೀಸ್ ಠಾಣೆ ಪಿಎಸ್‌ಐ ರಾಜು ಆರೋಪಿಗಳ ಪತ್ತೆಗೆ ಇಲಾಖೆ ಬಲೆ ಬೀಸಿದ್ದು, ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಭರವಸೆ ನೀಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement