ಸ್ವಉದ್ಯೋಗ ತರಬೇತಿಗೆ ಅರ್ಜಿ
ಶಿವಮೊಗ್ಗ: ಕುಮಟಾದ ಸಿಂಡ್ ಗ್ರಾಮೀಣ ಸ್ವಉದ್ಯೋಗ ತರಬೇತಿ ಸಂಸ್ಥೆಯು ಜೂ.4 ರಿಂದ ಜು.3 ರವರೆಗೆ 30 ದಿನಗಳ ಕಾಲ ಗೃಹಬಳಕೆಯ ವಿದ್ಯುತ್ ಉಪಕರಣಗಳಾದ ಫ್ಯಾನ್, ಮಿಕ್ಸರ್, ಗ್ರೈಂಡರ್ ದುರಸ್ತಿ ಹಾಗೂ ಮೋಟಾರ್ ವೈಂಡಿಂಗ್ (ಸಿಂಗಲ್ ಸ್ಪೇಸ್) ತಯಾರಿಸುವ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಿದ್ದು, ಶಿವಮೊಗ್ಗ ಜಿಲ್ಲೆಯ ಸಾಗರ ಮತ್ತು ಸೊರಬ ತಾಲೂಕಿನ ನಿರುದ್ಯೋಗಿ ಯುವಕರಿಂದ ಅರ್ಜಿ ಆಹ್ವಾನಿಸಲಾಗಿದೆ.
ತರಬೇತಿ ಪಡೆಯಲಿಚ್ಚಿಸುವ ಅಭ್ಯರ್ಥಿಯು, ಸ್ವಉದ್ಯೋಗದಲ್ಲಿ ಆಸಕ್ತಿ ಹೊಂದಿದ್ದು, 18ರಿಂದ 45 ವರ್ಷದೊಳಗಿನವರಾಗಿರಬೇಕು. ಕನ್ನಡ ಓದು ಮತ್ತು ಬರಹ ಬಲ್ಲವರಾಗಿರಬೇಕು. ಆಯ್ಕೆಯಾದ ಅಭ್ಯರ್ಥಿಗಳಿಗೆ ತರಬೇತಿ ಅವಧಿಯಲ್ಲಿ ಉಚಿತ ಊಟ ಮತ್ತು ವಸತಿ ಸೌಲಭ್ಯ ಕಲ್ಪಿಸಿಕೊಡಲಾಗುವುದು.
ಆಸಕ್ತರು ಯಾವುದಾದರು ಒಂದು ತರಬೇತಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯಲ್ಲಿ ಹೆಸರು, ತಂದೆ-ಪೋಷಕರ ಹೆಸರು, ವಿಳಾಸ, ದೂರವಾಣಿ ಸಂಖ್ಯೆ (ಇದ್ದರೆ), ವಯಸ್ಸು, ಹುಟ್ಟಿದ ದಿನಾಂಕ, ವಿದ್ಯಾರ್ಹತೆ, ಈಗ ಮಾಡುತ್ತಿರುವ ಉದ್ಯೋಗ, ಪಡೆಯಲಿಚ್ಚಿಸುವ ತರಬೇತಿ ಹಾಗೂ ಅನುಭವವನ್ನು ನಮೂದಿಸಿ ಜೂ. 4 ರೊಳಗಾಗಿ ನಿರ್ದೇಶಕರು, ಸಿಂಡ್ ಗ್ರಾಮೀಣ ಸ್ವಉದ್ಯೋಗ ತರಬೇತಿ ಸಂಸ್ಥೆ (ಸಿಂಡ್‌ಆರ್‌ಸೆಟಿ), ಕೈಗಾರಿಕಾ ವಸಾಹತು ಪ್ರದೇಶ, ಹೆಗಡೆ ರಸ್ತೆ, ಕುಮಟಾ-43 ಉತ್ತರ ಕನ್ನಡ ಈ ವಿಳಾಸಕ್ಕೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ ದೂ.ಸಂ. 08386-220530 ಅನ್ನು ಸಂಪರ್ಕಿಸಿ.
ವಾಹನ ಚಾಲನಾ ತರಬೇತಿಗೆ ಅರ್ಜಿ
ಶಿವಮೊಗ್ಗ: ಸಾರಿಗೆ ಇಲಾಖೆಯು ಪ್ರಸಕ್ತ ಸಾಲಿನ ಎನ್‌ಸಿಪಿ ಮತ್ತು ಎಸ್‌ಟಿಪಿ ಯೋಜನೆಯಡಿ ಜಿಲ್ಲೆಯ ಸಾಗರ, ಹೊಸನಗರ, ಸೊರಬ ಮತ್ತು ಶಿಕಾರಿಪುರ ತಾಲೂಕಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ವಾಹನ ಚಾಲನಾ ತರಬೇತಿ ಶಾಲೆಗಳ ಮೂಲಕ ವಿವಿಧ ರೀತಿಯ ವಾಹನಗಳ ಚಾಲನಾ ತರಬೇತಿ ನೀಡಲು ಉದ್ಧೇಶಿಸಿದೆ.
ಆಟೋರಿಕ್ಷಾ ಕ್ಯಾಬ್, ಲಘು ಮೋಟಾರು ವಾಹನ, ಭಾರೀ ಸಾರಿಗೆ ವಾಹನ ತರಬೇತಿ ನೀಡಲಾಗುವುದು. ಈ ತರಬೇತಿಗೆ ತಗಲುವ ವೆಚ್ಚದ ಶೇ.25 ರಷ್ಟನ್ನು ಅಭ್ಯರ್ಥಿಗಳು ಭರಿಸಬೇಕು. ಉಳಿದ ಹಣವನ್ನು ಸರ್ಕಾರದ ವತಿಯಿಂದ ಭರಿಸಲಾಗುವುದು. ಅರ್ಹ ಅಭ್ಯರ್ಥಿಗಳು ನಿಗದಿತ ನಮೂನೆಯ ಅರ್ಜಿಯನ್ನು ಜೂ. 2 ರಿಂದ 14 ರೊಳಗಾಗಿ ಸಾಗರದ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಜೂ.24 ರೊಳಗಾಗಿ ಸಲ್ಲಿಸುವಂತೆ ಸಾಗರದ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ತಿಳಿಸಿದ್ದಾರೆ.