ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ನೀರಿನ ಸಮಸ್ಯೆ ಬಗೆಹರಿಸಲು ಆಗ್ರಹ

Rashmi Kasaragodu
Updated On : 2 Apr 2013, 12:42 pm

ಕ.ಪ್ರ. ವಾರ್ತೆ   ಕುಣಿಗಲ್   ಏ.1
ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ 19ನೇ ವಾರ್ಡ್ನ ನಾಗರಿಕರು, ಸೋಮವಾರ ಪುರಸಭೆಗೆ ಮುತ್ತಿಗೆಹಾಕಿ ಪ್ರತಿಭಟನೆ ನಡೆಸಿದರು.
ಪುರಸಭೆಯ 19ನೇ ವಾರ್ಡ್ ಪ್ರದೇಶವಾದ ಅಂಬೇಡ್ಕರ್ ನಗರ ಸುತ್ತಮುತ್ತಲ ಪ್ರದೇಶದಲ್ಲಿ ಕಳೆದ ಎರರಡೂವರೆ ತಿಂಗಳಿನಿಂದಲೂ ಕುಡಿವ ನೀರಿನ ಸಮಸ್ಯೆ ಕಾಡುತ್ತಿದ್ದು, ಸಮಸ್ಯೆ ಬಗೆಹರಿಸುವಂತೆ ಪುರಸಭೆಗೆ ಹಲವಾರು ಬಾರಿ ಮನವಿ ನೀಡಿದ್ದರೂ ಸಮಸ್ಯೆ ಬಗೆಹರಿಸುವಲ್ಲಿ ಸಂಬಂಧಪಟ್ಟ ಸಿಬ್ಬಂದಿ ವಿಫಲರಾಗಿದ್ದರಿಂದ, ಬೇಸತ್ತ ನಾಗರಿಕರಾದ ಜಯಮ್ಮ, ಲಕ್ಷಮ್ಮ, ದೇವಿರಮ್ಮ, ವೆಂಕಟಲಕ್ಷ್ಮಮ್ಮ ಇತರರು ಪುರಸಭೆಗೆ ಆಗಮಿಸಿ, ಆಡಳಿತಾಧಿಕಾರಿ ಹಾಗೂ ಮುಖ್ಯಾಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ಸಮಸ್ಯೆ ಇತ್ಯರ್ಥಕ್ಕೆ ಕೂಡಲೆ ಅಗತ್ಯ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.
ವಾರ್ಡ್ನ ನಾಗರಿಕರ ಪ್ರತಿಭಟನೆ ವಿಷಯ ತಿಳಿದ ನೂತನ ಸದಸ್ಯ ಶಂಕರ್ ಸ್ಥಳಕ್ಕಾಗಮಿಸಿ, ನಾಗರಿಕರೊಂದಿಗೆ ಚರ್ಚಿಸಿ, ಉದ್ಭವಿಸಿರುವ ಸಮಸ್ಯೆ ಪರಿಹಾರಕ್ಕೆ ಸೂಕ್ತ ಕ್ರಮ ಕೈಗೊಳ್ಳುವಂತೆ ಮುಖ್ಯಾಧಿಕಾರಿ ಶುಭಾ ಅವರಿಗೆ ಮನವಿ ಸಲ್ಲಿಸಿದರು. ಮುಖ್ಯಾಧಿಕಾರಿಗಳು, ಸಂಬಂಧಪಟ್ಟ ಸಿಬ್ಬಂದಿಯೊಂದಿಗೆ ಚರ್ಚಿಸಿ ಅಗತ್ಯವಿರುವ ಕ್ರಮ ಕೈಗೊಳ್ಳುವ ಭರವಸೆ ನೀಡಿದ ಮೇರೆಗೆ ಪ್ರತಿಭಟನೆ ಹಿಂಪಡೆದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement