ಮಧುಗಿರಿ: ಇಂದು ಬೆಳ್ಳಿ ಪಲ್ಲಕ್ಕಿ ಉತ್ಸವ
ಮಧುಗಿರಿ: ಇಲ್ಲಿನ ಇತಿಹಾಸ ಪ್ರಸಿದ್ಧ ಶ್ರೀದಂಡಿನಮಾರಮ್ಮ ಜಾತ್ರೆ ಪ್ರಯುಕ್ತ ಏ.3 ರ ಬುಧವಾರ ದೇವಸ್ಥಾನದ ಆವರಣದಲ್ಲಿ ರಾತ್ರಿ ಬೆಳ್ಳಿ ಪಲ್ಲಕ್ಕಿ ಉತ್ಸವ ಆಕರ್ಷಕ ಸಿಡಿಮದ್ದು ಪ್ರದರ್ಶನ ಮತ್ತು ಉತ್ತಮ ರಾಸುಗಳಿಗೆ ಬಹುಮಾನ ವಿತರಣಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ ಎಂದು ಪ್ರಧಾನ ಅರ್ಚಕ ಎಂ.ಆರ್. ನಾಗಲಿಂಗಾಚಾರ್ ಮತ್ತು ಆಡಳಿತಾಧಿಕಾರಿ ಸಿ.ಅನಿತಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಅನುರಾಗ್ ತಿವಾರಿ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ರಮಣ್ ಗುಪ್ತ ಕಾರ್ಯಕ್ರಮ ಉದ್ಘಾಟಿಸುವರು. ಮುಖ್ಯ ಅತಿಥಿ ಜಿ.ಪಂ.ಕಾರ್ಯನಿರ್ವಾಹಕಾಧಿಕಾರಿ ಗೋವಿಂದರಾಜು ಶ್ರೀದಂಡಿನ ಮಾರಮ್ಮ ದೇವಾಲಯದ ಆಡಳಿತ ವರ್ಗ, ಗೌಡರು ಮತ್ತು ವಿವಿಧ ಉತ್ಸವ ಸಮಿತಿಗಳ ಅಧ್ಯಕ್ಷರು ಸದಸ್ಯರು ಸೇವಾಕರ್ತರು ಭಾಗವಹಿಸಲಿದ್ದಾರೆ.