ಉಗಮ ಶ್ರೀನಿವಾಸ್ಗೆ ಮಾತೃ ವಿಯೋಗ
ತುಮಕೂರು: ಕನ್ನಡಪ್ರಭ ಪ್ರಧಾನ ವರದಿಗಾರ ಉಗಮ ಶ್ರೀನಿವಾಸ್ ಅವರ ತಾಯಿ ನಾಗಮಣಿ ಅವರು ಅಲ್ಪ ಕಾಲದ ಅನಾರೋಗ್ಯದಿಂದ ಶನಿವಾರ ಬೆಳಗ್ಗೆ ನಿಧನ ರಾಗಿದ್ದಾರೆ.
ಅವರಿಗೆ 63 ವರ್ಷ ವಯಸ್ಸಾಗಿತ್ತು. ಮಿದುಳಿನಲ್ಲಿ ರಕ್ತ ಸ್ರಾವ ಆಗಿದ್ದರಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕಳೆದ 40 ದಿವಸಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು.
ಶುಕ್ರವಾರ ಅವರು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದರು. ಆದರೆ ಶನಿವಾರ ಬೆಳಗ್ಗೆ ತೀವ್ರ ಹೃದಯಾಘಾತದಿಂದ ಕೊನೆಯುಸಿರೆಳೆದರು. ಅವರಿಗೆ ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಇದ್ದಾರೆ. ಅವರ ಅಂತ್ಯಕ್ರಿಯೆ ನಂಜನಗೂಡಿನ ಕಪಿಲಾ ನದಿಯ ತೀರದಲ್ಲಿ ನೆರವೇರಿತು.