ವಿವಿಧ ಪಕ್ಷಗಳ ಅಭ್ಯರ್ಥಿಗಳ ಆಯ್ಕೆ ಹೊರಬೀಳುತ್ತಿದ್ದಂತೆ ಸಂಭ್ರಮಾಚರಣೆ
ಪಾವಗಡ: ವಿಧಾನ ಸಭಾ ಚುನಾವಣೆ ಹಿನ್ನೆಲೆಯಲ್ಲಿ ವಿವಿಧ ಪಕ್ಷಗಳಲ್ಲಿ ಅಭ್ಯರ್ಥಿಗಳ ಅಧಿಕೃತ ಆಯ್ಕೆ ಪಟ್ಟಿ ಬಿಡುಗಡೆಯಾಗಿದ್ದು ಕಾಂಗ್ರೆಸ್ನಿಂದ ಎಚ್.ವಿ. ವೆಂಕಟೇಶ್, ಜೆಡಿಎಸ್ನಿಂದ ಕೆ.ಎಂ. ತಿಮ್ಮರಾಯಪ್ಪ, ಬಿಜೆಪಿಯಿಂದ ವಿಜಯ್ರಾಜ್, ಕೆಜೆಪಿಯಿಂದ ಪಾವಗಡ ಶ್ರೀರಾಮ್ ಹಾಗೂ ಬಿಎಸ್ಆರ್ ಕಾಂಗ್ರೆಸ್ನಿಂದ ಮಾಜಿ ಶಾಸಕ ಉಗ್ರನರಸಿಂಹಪ್ಪ, ಬಿಎಸ್ಪಿಯಿಂದ ಭೂಪೂರ್ ರಾಮಸುಬ್ಬಯ್ಯ ಅಭ್ಯರ್ಥಿಗಳಾಗಿದ್ದಾರೆ.
ಶುಕ್ರವಾರ ಸಂಜೆ ವಿವಿಧ ಪಕ್ಷಗಳಿಂದ ಅಧಿಕೃತ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗುತ್ತಿದ್ದಂತೆ ಕಾಂಗ್ರೆಸ್ ಕಾರ್ಯಕರ್ತರು ಪಟ್ಟಣದ ದೇವಸ್ಥಾನದ ಸರ್ಕಲ್ನಲ್ಲಿ ಪಟಾಕಿ ಸಿಡಿಸಿ ಸಂಭ್ರಮ ವ್ಯಕ್ತಪಡಿಸಿದರು. ಹಾಗೆಯೇ ಜೆಡಿಎಸ್ನಿಂದ ಕೆ.ಎಂ. ತಿಮ್ಮರಾಯಪ್ಪ ಅಭ್ಯರ್ಥಿಯೆಂದು ಘೋಷಣೆ ಆದ ಕೂಡಲೇ ಸಾವಿರಾರು ಮಂದಿ ಜೆಡಿಎಸ್ ಕಾರ್ಯಕರ್ತರು ಪಟ್ಟಣದ ಜೆಡಿಎಸ್ ಕಚೇರಿಯ ಬಳಿ ಪಟಾಕಿಗಳನ್ನು ಸಿಡಿಸಿ ಸಂಭ್ರಮ ವ್ಯಕ್ತಪಡಿಸಿ ಪಕ್ಷದ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಹಾಗೂ ಅಭ್ಯರ್ಥಿ ಕೆ.ಎಂ. ತಿಮ್ಮರಾಯಪ್ಪ ಅವರಿಗೆ ಜೈಕಾರ ಹಾಕಿದರು.
ಅಭ್ಯರ್ಥಿಗಳ ಆಯ್ಕೆಯ ಘೋಷಣೆ ಆದ ಕೂಡಲೇ ಬಿಜೆಪಿ, ಕೆಜೆಪಿ, ಬಿಎಸ್ಆರ್, ಬಿಎಸ್ಪಿ ಕಾರ್ಯಕರ್ತರು ಪಟ್ಟಣದಲ್ಲಿ ಪಟಾಕಿಗಳನ್ನು ಸಿಡಿಸಿ ತಮ್ಮ ಪಕ್ಷಗಳ ಅಧಿಕೃತ ಅಭ್ಯರ್ಥಿಗಳಿಗೆ ಜೈಕಾರ ಹಾಕುತ್ತಿರುವುದು ಸಾಮಾನ್ಯವಾಗಿತ್ತು. ಬಹು ನಿರೀಕ್ಷೆಯಲ್ಲಿದ್ದ ಕಾಂಗ್ರೆಸ್ ಅಭ್ಯರ್ಥಿ ಎಚ್.ವಿ. ವೆಂಕಟೇಶ್ ಎಂದು ಅಧಿಕೃತ ಪ್ರಕಟಣೆ ಹೊರಬಿದ್ದ ಕೂಡಲೇ ಕಾಂಗ್ರೆಸ್ ಅಧ್ಯಕ್ಷ ಪರಮೇಶ್ವರ್, ಸಿದ್ದರಾಮಯ್ಯ ಜಿಲ್ಲಾ ಅಧ್ಯಕ್ಷ ಷಫಿ ಅಹಮ್ಮದ್, ಮುಖಂಡ ಕೆ.ಎನ್.ರಾಜಣ್ಣ ಹಾಗೂ ಶಾಸಕ ವೆಂಕಟರಮಣಪ್ಪ ಅವರಿಗೆ ಜೈಕಾರ ಹಾಕಿದರು.