ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ: ನರಸೇಗೌಡ

Rashmi Kasaragodu
Updated On : 7 Apr 2013, 11:40 am

ಕ.ಪ್ರ.ವಾರ್ತೆ   ಗುಬ್ಬಿ   ಏ.7
ಕಾಂಗ್ರೆಸ್ ಅಧಿಕೃತ ಅಭ್ಯರ್ಥಿಯಾಗಿ ಘೋಷಿಸುವ ಭರವಸೆ ನೀಡಿ ಮೊದಲ ಪಟ್ಟಿಯಲ್ಲಿ ಗುಬ್ಬಿ ವಿಧಾನಸಭಾ ಕ್ಷೇತ್ರಕ್ಕೆ ಟಿಕೆಟ್ ನೀಡದಿರುವ ಹಿನ್ನೆಲೆಯಲ್ಲಿ ವಿಧಾನಸಭಾ ಚುನಾವಣೆಯಲ್ಲಿ  ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಬೀರಮಾರನಹಳ್ಳಿ ನರಸೇಗೌಡ ತಿಳಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಹಾಗೂ ಜಿಲ್ಲೆಯ ಎಲ್ಲಾ ಕಾಂಗ್ರೆಸ್ ಮುಖಂಡರ ಸಮ್ಮುಖದಲ್ಲಿ ಜೆಡಿಎಸ್ ತೊರೆದು ಕಾಂಗ್ರೆಸ್ಗೆ ಸೇರ್ಪಡೆಗೊಂಡ ಸಂದರ್ಭದಲ್ಲಿ ಗುಬ್ಬಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಪಕ್ಷದ ಅಧಿಕೃತ ಟಿಕೆಟ್ ನೀಡುವ ಭರವಸೆ ನೀಡಿದ್ದರು. ಆದರೆ ತಾಲೂಕಿನ ಕಾಂಗ್ರೆಸ್ ಪಕ್ಷದ ಗುಬ್ಬಿ ಮತ್ತು ನಿಟ್ಟೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಹಾಗೂ ವಿವಿಧ ಘಟಕದ ಪದಾಧಿಕಾರಿಗಳು ನನ್ನ ಪರವಾಗಿ ಬೆಂಬಲ ಸೂಚಿಸಿದ್ದರೂ ಸಹ ನನ್ನನ್ನು ಪರಿಗಣಿಸದೆ ಬೇರೆಯವರಿಗೆ ಟಿಕೆಟ್ ನೀಡುವುದಾಗಿ ಮೊದಲ ಪಟ್ಟಿಯಲ್ಲಿ ಪ್ರಕಟಿಸಿರುವುದು ಖಂಡನೀಯ. ಪಕ್ಷ ಟಿಕೆಟ್ ನೀಡದಿದ್ದ ಪಕ್ಷದಲ್ಲಿ ಬಂಡಾಯ ಕಾಂಗ್ರೆಸ್ ಅಭ್ಯರ್ಥಿಯಾಗಿ ನಿಲ್ಲುವುದಾಗಿ ಹೇಳಿಕೆ ನೀಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement