ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ಜಿಲ್ಲಾಧಿಕಾರಿ ಕಚೇರಿಗೆ ಪೊಲೀಸ್ ಬಿಗಿ ಭದ್ರತೆ

Mainashree
Updated On : 11 Apr 2013, 1:37 am

ತುಮಕೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲಾಧಿಕಾರಿ ಕಚೇರಿಗೆ ಬಿಗಿ ಪೊಲೀಸ್ ಬಂದೋಬಸ್ತ್ ಹಾಕಲಾಗಿದೆ. ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭವಾಗಿರುವುದರಿಂದ ಈ ಬಿಗಿ ಪೊಲೀಸ್ ಬಂದೋಬಸ್ತ್ ಹಾಕಲಾಗಿದೆ. ನಾಮಪತ್ರ ಸಲ್ಲಿಕೆ ನಂತರ ಈ ಭದ್ರತೆಯನ್ನು ಹಿಂತೆಗೆದುಕೊಳ್ಳಲಾಗುವುದು ಎನ್ನುತ್ತಾರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಮಣಗುಪ್ತ.
ತುಮಕೂರು ಜಿಲ್ಲೆಯ ಒಟ್ಟು 11 ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪೊಲೀಸ್ ನಿಗಾ ಇಡಲಾಗಿದೆ. ಸಂಪೂರ್ಣವಾಗಿ ಶಾಂತಿ ಮತ್ತು ಸುವ್ಯವಸ್ಥೆಯಿಂದ ಕೂಡಿದ ಚುನಾವಣೆ ಮಾಡಬೇಕೆಂಬ ಇಂಗಿತವನ್ನು ಜಿಲ್ಲಾಡಳಿತ ಕೂಡ ಹೊಂದಿದೆ.
ಈಗಾಗಲೇ ಚುನಾವಣೆಗೆ ಸಂಬಂಧಿಸಿದಂತೆ ಸಾಕಷ್ಟು ತಯಾರಿ ಆರಂಭವಾಗಿದೆ. ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ. ಸಹಾಯವಾಣಿ ತೆರೆಯಲಾಗಿದೆ. ಮತದಾರರ ವಿವರಗಳು ಸೇ ರಿದಂತೆ ಚುನಾವಣೆಗೆ ಸಂಬಂಧಿಸಿದ ಯಾವುದೇ ಮಾಹಿತಿ ಕ್ಷಣಾರ್ಧದಲ್ಲಿ ಲಭ್ಯವಾಗುವಂತೆ ಮುಂಜಾಗ್ರತೆ ವಹಿಸಲಾಗಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಬಿಗಿ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಡಳಿತ ತೀರ್ಮಾನಿಸಿದೆ. ಚೆಕ್ ಪೋಸ್ಟ್  ನಿರ್ಮಿಸುವುದು ಸೇರಿದಂತೆ ಹತ್ತು ಹಲವಾರು ಯೋಜನೆಗಳನ್ನು ಈ ಗಾಗಲೇ ರೂಪಿಸಲಾಗಿದೆ. ನೀತಿ ಸಂಹಿತೆ ಉಲ್ಲಂಘನೆ ವಿರುದ್ಧ ಜಿಲ್ಲಾಡಳಿತ ಹಾಗೂ ಜಿಲ್ಲಾ ಪೊಲೀಸ್ ಇಲಾಖೆ ನಿರ್ದಾಕ್ಷಿಣ್ಯ ಕ್ರಮಕ್ಕೆ ಮುಂದಾಗಿದೆ. ಅನುಮಾನ ಬಂದ ಕೂಡಲೇ ಪೊಲೀಸರು ಕಾರ್ಯ ಪ್ರವೃತ್ತರಾಗುತ್ತಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement