ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ಜಿಲ್ಲೆಯ ಕೆಲವೆಡೆ ನಾಮಪತ್ರ ಸಲ್ಲಿಕೆ

Mainashree
Updated On : 13 Apr 2013, 11:29 am

ತುಮಕೂರು: ತುಮಕೂರು ಜಿಲ್ಲೆಯ ಚಿ.ನಾ.ಹಳ್ಳಿ, ತುಮಕೂರು ಗ್ರಾಮಾಂತರ, ಕೊರಟಗೆರೆ, ತುರುವೇಕೆರೆ, ಮತ್ತು ಮಧುಗಿರಿ ವಿಧಾನಸಭಾ ಕ್ಷೇತ್ರದಲ್ಲಿ ಶನಿವಾರ ನಾಮಪತ್ರ ಸಲ್ಲಿಕೆಯಾಗಿದ್ದು, ವಿವರಗಳು ಈ ಕೆಳಕಂಡಂತಿದೆ. ಚಿ.ನಾ.ಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ  ಜಿ.ಪ್ರಕಾಶ್ ಅವರು ಸಂಯುಕ್ತ ಜನತಾದಳ ಪಕ್ಷದಿಂದ 3 ನಾಮಪತ್ರ ಸಲ್ಲಿಸಿದ್ದಾರೆ.
ತುಮಕೂರು ಗ್ರಾಮಾಂತರ  ವಿಧಾನಸಭಾ ಕ್ಷೇತ್ರದಿಂದ ಜಿ.ಆರ್. ನಾಗರಾಜು ಅವರು ಸ್ವತಂತ್ರ್ಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.
ಕೊರಟಗೆರೆ ವಿಧಾನಸಭಾ ಕ್ಷೇತ್ರದಿಂದ  ಸಿ.ಎಸ್. ಹನುಮಂತರಾಯ ಅವರು ಸಂಯುಕ್ತ ಜನತಾದಳದಿಂದ ನಾಮಪತ್ರ ಸಲ್ಲಿಸಿದರೆ ತುರುವೇಕೆರೆ ವಿಧಾನಸಭಾ ಕ್ಷೇತ್ರದಿಂದ ಕೆ.ಹುಚ್ಚೇಗೌಡ ಅವರು ಬಿಜೆಪಿ ಪಕ್ಷದಿಂದ ನಾಮಪತ್ರ ಸಲ್ಲಿಸಿದ್ದಾರೆ.
ಮಧುಗಿರಿ ವಿಧಾನಸಭಾ ಕ್ಷೇತ್ರದಿಂದ  ಸಣ್ಣೀರಪ್ಪ ಅವರು ಜಾತ್ಯತೀತ ಜನತಾದಳ  ಪಕ್ಷದಿಂದ ನಾಮಪತ್ರ ಸಲ್ಲಿಸಿದ್ದಾರೆ.
ಹಾಗೆಯೇ ಎನ್. ವಿಜಯ್ ಕುಮಾರ್ ಅವರು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದಿಂದ ನಾಮಪತ್ರ ಸಲ್ಲಿಸಿದರೆ ಜಿ.ನಾಗೇಂದ್ರ ಅವರು ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement