ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ಬೆಂಗಳೂರಿನಲ್ಲಿ ಬಾಂಬ್ ಪತ್ತೆ ಹಚ್ಚಿದ 'ಶ್ವೇತಾ' ನಿಧನ

Mainashree
Updated On : 13 Apr 2013, 11:01 am

ತುಮಕೂರು: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಮೂರು ಬಾಂಬ್‌ಗಳನ್ನು ಪತ್ತೆ ಹಚ್ಚಿದ್ದ ಪೊಲೀಸ್ ಶ್ವಾನ ಶ್ವೇತಾ (10) ಹೃದಯಾಘಾತದಿಂದ ಶನಿವಾರ ಮೃತಪಟ್ಟಿದೆ. 2010ರಲ್ಲಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬಾಂಬ್ ಸ್ಫೋಟಗೊಂಡಿತ್ತು. ಆಗ ಪೊಲೀಸ್ ಶ್ವಾನ  ಶ್ವೇತಾಳನ್ನು ತುಮಕೂರಿನಿಂದ ಕರೆದೊಯ್ಯಲಾಗಿತ್ತು. ಕ್ರೀಡಾಂಗಣದ ಸುತ್ತ ಹುದುಗಿಸಿಟ್ಟಿದ್ದ ಮೂರು ಬಾಂಬ್‌ಗಳನ್ನು ಪತ್ತೆ ಹಚ್ಚುವಲ್ಲಿ ಈ ಶ್ವಾನ ಮಹತ್ವದ ಪಾತ್ರ ವಹಿಸಿತ್ತು. ಕಳೆದ 9 ವರ್ಷಗಳಲ್ಲಿ ತುಮಕೂರು ಜಿಲ್ಲಾ ಸಶಸ್ತ್ರ ಪೊಲೀಸ್ ದಳದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಶ್ವೇತಾ 'ಸ್ಫೋಟಕ ಪತ್ತೆ ಪರಿಣತೆ'. ನಗರದಲ್ಲಿ ಗಣ್ಯರು ಭೇಟಿ ನೀಡುವ ಕಾರ್ಯಕ್ರಮದಲ್ಲೂ ಇದೇ ಶ್ವಾನವನ್ನು ಬಳಸಿಕೊಳ್ಳಲಾಗುತ್ತಿತ್ತು. ಮರಣೋತ್ತರ ಪರೀಕ್ಷೆಯ ನಂತರ ಸಕಲ ಸರ್ಕಾರಿ ಗೌರವದೊಂದಿಗೆ ಶ್ವೇತಾಳ ಅಂತಿಮ ಸಂಸ್ಕಾರ ನೆರವೇರಿಸಲಾಯಿತು. ಎಸ್ಪಿ ರಮಣಗುಪ್ತ, ಅಡಿಷನಲ್ ಎಸ್ಪಿ ಹನುಮಂತರಾಯ ಅಂತಿಮ ನಮನ ಸಲ್ಲಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement