ಜೆಡಿಎಸ್ ಬಂಡಾಯ ಅಭ್ಯರ್ಥಿ ಮೈಲಾರಪ್ಪ ನಾಮಪತ್ರ ಸಲ್ಲಿಕೆ
ತಿಪಟೂರು: ಜೆಡಿಎಸ್‌ನಿಂದ ಮೈಲಾರಪ್ಪ ತಿಪಟೂರು ವಿಧಾನಸಭಾ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ ಬಯಸಿ 5ಸಾವಿರಕ್ಕೂ ಹೆಚ್ಚು ಬೆಂಬಲಿಗರೊಂದಿಗೆ ನಗರದ ಕೆಂಪಮ್ಮ ದೇವಾಲಯದ ಆವರಣದಿಂದ ಮೆರವಣಿಗೆಯಲ್ಲಿ ತಾಲೂಕು ಕಚೇರಿಗೆ ಆಗಮಸಿ ಮಂಗಳವಾರ ನಾಮಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಜೆಡಿಎಸ್ ಹಿರಿಯ ಉಪಾಧ್ಯಕ್ಷ ಪ್ರೊ.ರೇಣುಕಾರ್ಯ, ಕಾರ್ಯಾಧ್ಯಕ್ಷ ರಾಮಕೃಷ್ಣೇಗೌಡ, ಯುವ ಪ್ರಧಾನ ಕಾರ್ಯದರ್ಶಿ ಗುರುಪ್ರಸನ್ನ, ಮುಖಂಡರಾದ ಡಾ.ರೋಹಿತ್, ಮಾಜಿ ಗ್ರಾ.ಪಂ.ಅಧ್ಯಕ್ಷ ತಿಮ್ಮೇಗೌಡ, ಮುಖಂಡರಾದ ಸುಗೂರು ಗುರುಮೂರ್ತಿ, ರಂಗಪ್ಪ, ಜಯಕುಮಾರ್ ಸೇರಿದಂತೆ ಮತ್ತಿತರ ಮುಖಂಡರುಗಳಿದ್ದರು.