ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

'ಎಚ್ಡಿಕೆ ಮತ್ತೆ ಮುಖ್ಯಮಂತ್ರಿ ಆದರೆ ಮಧುಗಿರಿಯ ಭಾಗ್ಯದ ಬಾಗಿಲು ತೆರೆದಂತೆ'

Mainashree
Updated On : 18 Apr 2013, 12:09 pm

ಕ.ಪ್ರ. ವಾರ್ತೆ  ಮಧುಗಿರಿ  ಏ.17
ಕುಮಾರಸ್ವಾಮಿ ಮತ್ತೆ ಸಿಎಂ ಆದರೆ ಮಧುಗಿರಿಯ ಭಾಗ್ಯದ ಬಾಗಿಲು ತೆರೆದಂತೆ ಎಂದು ಜೆಡಿಎಸ್ ಅಭ್ಯರ್ಥಿ ವೀರಭದ್ರಯ್ಯ ವಿಶ್ವಾಸ ವ್ಯಕ್ತಪಡಿಸಿದರು.
ವಿಧಾನಸಭಾ ಚುನಾವಣೆಗೆ ಕೊನೆ ದಿನವಾದ ಬುಧವಾರ ಲಾಲಪೇಟೆ ಶ್ರೀಆಂಜನೇಯಸ್ವಾಮಿಗೆ ಪೂಜೆ ಸಲ್ಲಿಸಿ ಅಪಾರ ಬೆಂಬಲಿಗರೊಂದಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ ಚುನಾವಣಾಧಿಕಾರಿಗೆ ಅವರು ನಾಮ ಪತ್ರ ಸಲ್ಲಿಸಿದರು.
ನಂತರ ಸುದ್ದಿಗಾರರ ಜತೆ ಮಾತನಾಡಿ,ಈ ಬಾರಿ ಜೆಡಿಎಸ್ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆಯಾಗುವ ಮೂಲಕ ಮತ್ತೆ ಕುಮಾರಣ್ಣ ಈ ರಾಜ್ಯದ ಸಿಎಂ ಆಗುತ್ತಾರೆ ಎಂದರು.
ಮುಖಂಡ ಜಿ.ಜೆ. ರಾಜಣ್ಣ ಮಾತನಾಡಿದರು. ಅಪಾರ ಬೆಂಬಲಿಗರು ಪಟಾಕಿ ಸಿಡಿಸಿ ವೀರಭದ್ರಯ್ಯ ಅವರ ಪರಜಯಕಾರ ಕೂಗಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement