ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ಅಂಬೇಡ್ಕರ್ ಶಿಕ್ಷಣಕ್ಕೆ ಮಹತ್ವ ನೀಡಿದ ವ್ಯಕ್ತಿ

Mainashree
Updated On : 18 Apr 2013, 11:08 am

ಶಿರಾ: ಕರ್ನಾಟಕ ದಲಿತ ಸಂಘರ್ಷ ಸಮಿತಿ ಶಿರಾ ಘಟಕದ ವತಿಯಿಂದ ಪಟ್ಟಣದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ದಸಂಸ ಸಂಚಾಲಕ ಲಕ್ಷ್ಮಿಕಾಂತ್ ವಹಿಸಿ ಮಾತನಾಡಿ ಡಾ.ಬಿ.ಆರ್.ಅಂಬೇಡ್ಕರ್ ಶೋಷಿತ ಸಮಾಜದಿಂದ ಬಂದರೂ ಶಿಕ್ಷಣ ಸಂಘಟನೆಗೆ ಹೆಚ್ಚು ಶ್ರಮವಹಿಸಿ ಎಲ್ಲಾ ಜನಾಂಗದ ಅಭಿವೃದ್ಧಿಗೆ ಹಗಲಿರುಳು ಚಿಂತನೆ ಮಾಡುತ್ತಿದ್ದ ಮಹಾನ್ ವ್ಯಕ್ತಿ ಎಂದರು.  ಜಾನಪದ ವಿದ್ವಾಂಸ ಡಾ.ಚಿಕ್ಕಣ್ಣ ಯಣ್ಣೆಕಟ್ಟೆ,  ಡಾ.ಬಿ.ಆರ್.ಅಂಬೇಡ್ಕರ್ ಅವರ ಆದರ್ಶಗಳನ್ನು ಇಂದಿನ ಸಮಾಜ ಮುಖಂಡರು ಅಳವಡಿಸಿಕೊಳ್ಳಬೇಕು ಎಂದರು. ಕಾರ್ಯಕ್ರಮದಲ್ಲಿ ಟಿ.ಲೋಕೇಶ್, ನರಸಪ್ಪ, ಫಕೃದ್ದೀನ್, ಭೂತೇಶ್, ತಿಪ್ಪೇಸ್ವಾಮಿ ಮತ್ತಿತರರು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement