ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ಪಾವಗಡ ಕಾಂಗ್ರೆಸ್ ಅಭ್ಯರ್ಥಿ ವೆಂಕಟೇಶ್ ನಾಮಪತ್ರ

Mainashree
Updated On : 18 Apr 2013, 11:09 am

ಕ.ಪ್ರ. ವಾರ್ತೆ    ಪಾವಗಡ    ಏ.18
ಸಾವಿರಾರು ಸಂಖ್ಯೆಯ ಕಾರ್ಯಕರ್ತರೊಂದಿಗೆ ತೆರದ ವಾಹನದಲ್ಲಿ ರೋಡ್ ಶೋ ಮೂಲಕ ಮೆರವಣಿಗೆಯೊಂದಿಗೆ ಆಗಮಿಸಿದ ಕಾಂಗ್ರೆಸ್ ಅಭ್ಯರ್ಥಿ ಎಚ್.ವಿ.ವೆಂಕಟೇಶ್ ಬುಧವಾರ ಚುನಾವಣಾಧಿಕಾರಿಗಳಿಗೆ ನಾಮ ಪತ್ರ ಸಲ್ಲಿಸಿದರು.
ಪಾವಗಡ ಕ್ಷೇತ್ರದ ಸ್ಪರ್ಧೆ ಬಯಸಿ ಕಾಂಗ್ರೆಸ್ ಅಭ್ಯರ್ಥಿ ಎಚ್.ವಿ.ವೆಂಕಟೇಶ್ ನಾಮ ಪತ್ರ ಸಲ್ಲಿಸುವ ಹಿನ್ನೆಲೆಯಲ್ಲಿ ತಾಲೂಕಿನದ್ಯಂತ ಸಾಗರೋಪಾಧಿಯಲ್ಲಿ ಕಾರ್ಯಕರ್ತರು ಅಭಿಮಾನಿಗಳು ಪಟ್ಟಣಕ್ಕೆ ಆಗಮಿಸಿ
ಬೆಂಬಲ ವ್ಯಕ್ತಪಡಿಸಿದರು. ಪಟ್ಟಣದ ಚಳ್ಳಕೆರೆ ಕ್ರಾಸ್‌ನಿಂದ ಅರಸೀಕೆರೆ ರಸ್ತೆಯ ಶ್ರೀನಿವಾಸ ಟಾಕೀಸ್‌ವರೆಗೆ ಕಾರ್ಯಕರ್ತರು ಅಭಿಮಾನಿಗಳು ಸೇರಿದರು.   ಚಳ್ಳಕೆರೆ ರಸ್ತೆಯಲ್ಲಿ 1ಗಂಟೆಗೊ ಹೆಚ್ಚುಕಾಲ ಟ್ರಾಫಿಕ್ ಜಾಮ್ ಆಗಿ ಬಸ್‌ಗಳು ಸೇರಿದಂತೆ ವಿವಿಧ ವಾಹನಗಳ ಓಡಾಟಕ್ಕೆ ತೀವ್ರ ತೊಂದರೆ ಆಗಿ ದೂರದ ನಗರ ಹಾಗೂ ಗ್ರಾಮೀಣ ಪ್ರದೇಶಗಳಿಗ ಹೋಗಬೇಕಾದ ಪ್ರಯಾಣಿಕರಿಗೆ ಸಮಸ್ಯೆ ಅನುಭವಿಸಿದರು. ಅಹಿತರಕ ಘಟನೆಗಳಿಗೆ ಅವಕಾಶ ನೀಡದೇ ಶಾಂತಿಯುತ ವಾತಾವರಣ ಕಲ್ಪಿಸುವಲ್ಲಿ ಯಶಸ್ವಿಯಾದ ಪೊಲೀಸರು  ಪ್ರಯಾಣಿಕರ ಪ್ರಯಾಣಕ್ಕೆ ಸುರಕ್ಷೆತೆ ಕಲ್ಪಿಸಲು ಕಾರ್ಯಕರ್ತರನ್ನು ನಿಯಂತ್ರಿಸುವಲ್ಲಿ  ಹರಸಾಹಸಪಟ್ಟರು.
ಬೆಳಿಗ್ಗೆ 11ಗಂಟೆಗೆ ಪಟ್ಟಣದ ವೆಂಕಟೇಶ್ವರ ವಿದ್ಯಾ ಸಂಸ್ಥೆಯಿಂದ ಭಾರಿ ಸಂಖ್ಯೆ ಕಾರ್ಯಕರ್ತರೊಂದಿಗೆ ತೆರೆದ ವಾಹನದೊಂದಿಗೆ ಮೆರವಣಿಗೆಯಲ್ಲಿ ಆಗಮಿಸಿದ ಶಾಸಕ ವೆಂಕಟರಮಣಪ್ಪ, ಮಾಜಿ ಶಾಸಕ ಸೋಮ್ಲಾನಾಯಕ್, ನರಸಿಂಹಯ್ಯ, ಪಕ್ಷದ ತಾಲೂಕು ಅಧ್ಯಕ್ಷ ಸುದೇಶ್‌ಕುಮಾರ್, ಹಿರಿಯ ಮುಖಂಡ ಮಾನಂ ವೆಂಕಟಸ್ವಾಮಿ ಹಾಗೂ ಅಭ್ಯರ್ಥಿ ಎಚ್.ವಿ. ವೆಂಕಟೇಶ್ ಚುನಾವಣೆ ಕಚೇರಿಗೆ ತೆರಳಿ ಚುನಾವಣಾಧಿಕಾರಿ ಗಂಗಯ್ಯ ಅವರಿಗೆ ನಾಮಪತ್ರ ಸಲ್ಲಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement