ಬಿಜೆಪಿ, ಜೆಡಿಎಸ್ ಹೊಂದಾಣಿಕೆ
ಹಾಸನ: ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡಿವೆ ಎಂದು ರಾಜ್ಯ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ರಿಜ್ವಾನ್ ಹರ್ಷದ್ ಆರೋಪಿಸಿದ್ದಾರೆ. ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿಯೂ ಈ ಪಕ್ಷಗಳ ನಡುವೆ ಹೊಂದಾಣಿಕೆಯಾಗಿದೆ ಎಂದು ಹೇಳಿದರು. ಬಿಜೆಪಿ ಸರ್ಕಾರ ಹಿಂದಿನ ಚುನಾವಣೆಯಲ್ಲಿ ನೀಡಿದ್ದ ಪ್ರಣಾಳಿಕೆಯನ್ನೇ ಪೂರ್ಣವಾಗಿ ಅನುಷ್ಠಾನಗೊಳಿಸಿಲ್ಲ. ಕಳೆದ 5 ವರ್ಷಗಳಲ್ಲಿ ಬಿಜೆಪಿ ಸರ್ಕಾರ ನಡೆಸಿ ಭ್ರಷ್ಟಾಚಾರ ಮುಂದೆಂದೂ ಆಗಬಾರದು. ಈ ಭ್ರಷ್ಟಾಚಾರದ ತನಿಖೆ ಆಗಬೇಕು ಹಾಗೂ ಇದರಲ್ಲಿ ಭಾಗಿಯಾಗಿರುವವರಿಗೆ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದರು.