ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಮಿರ್ಜಿ
ತುಮಕೂರು: ಜೆಡಿಎಸ್ ತೊರೆದು ಕಾಂಗ್ರೆಸ್ಗೆ ಸೇರ್ಪಡೆಯಾದ ವಿಜಯಪ್ರಕಾಶ್ ಮಿರ್ಜಿ ಅವರನ್ನು ತುಮಕೂರು ಜಿಲ್ಲಾ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಸ್. ಷಫಿ ಅಹಮದ್ ತಿಳಿಸಿದರು. ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮಿರ್ಜಿ ಕಾಂಗ್ರೆಸ್ಗೆ ಬಂದಿರುವುದು ಆನೆ ಬಲ ಬಂದಂತಾಗಿದೆ. ಜೆಡಿಎಸ್ ಶೇ. 100 ರಷ್ಟು ಖಾಲಿಯಾಗುವುದು ಖಚಿತ ಎಂದು ಭವಿಷ್ಯ ನುಡಿದರು.