'ರಾಮಸ್ವಾಮಿಗೌಡ ಮೇಲೆ ಬೇಸರ, ಜೆಡಿಎಸ್ಗೆ ವರ'
ಕ.ಪ್ರ. ವಾರ್ತೆ , ಕುಣಿಗಲ್ , ಏ.21
ಶಾಸಕ ಬಿ.ಬಿ. ರಾಮಸ್ವಾಮಿಗೌಡರು, ತಾವು ಶಾಸಕರಾಗಿದ್ದ ಅವಧಿಯಲ್ಲಿ ಯಾವುದೇ ಅಭಿವೃದ್ಧಿ ಮಾಡದೆ, ತಾಲೂಕನ್ನು ಹಿಂದುಳಿಯುವಂತೆ ಮಾಡಿದ್ದಾರೆ. ಇವರ ಅಸಮರ್ಪಕ ಕಾರ್ಯವೈಖರಿಯಿಂದ ಜನತೆ ಬೇಸತ್ತು ಈ ಬಾರಿ ಜೆಡಿಎಸ್ಅನ್ನು ಆಶೀರ್ವದಿಸಲಿದ್ದಾರೆಂದು ಜೆಡಿಎಸ್ ಅಭ್ಯರ್ಥಿ ಮಾಜಿ ಸಚಿವ ಡಿ.ನಾಗರಾಜಯ್ಯ ತಿಳಿಸಿದರು.
ಭಾನುವಾರ, ಪಟ್ಟಣದ ಬಿಎಂ ರಸ್ತೆಯಲ್ಲಿ ಜೆಡಿಎಸ್ ಚುನಾವಣಾ ಪ್ರಚಾರ ಕಚೇರಿ ಉದ್ಘಾಟನೆ ಹಾಗೂ ಕಾಂಗ್ರೆಸ್, ಬಿಜೆಪಿ ಮುಖಂಡರ ಜೆಡಿಎಸ್ ಸೇರ್ಪಡೆ ಕಾರ್ಯಕ್ರಮದ ನಂತರ ಮಾತನಾಡಿದ ಅವರು, ಶಾಸಕ ಬಿ.ಬಿ.ರಾಮಸ್ವಾಮಿಗೌಡರ ನಿರ್ಲಕ್ಷ್ಯತೆಯಿಂದ ತಾಲೂಕಿಗೆ ಹರಿಯಬೇಕಾದ ಹೇಮಾವತಿ ನೀರು ಸಮರ್ಪಕವಾಗಿ ಹರಿಯದೆ, ಪಟ್ಟಣ ಸೇರಿದಂತೆ ತಾಲೂಕಿನ ವಿವಿದ ಭಾಗದ ಜನತೆ ಪರದಾಡುವಂತಾಗಿದೆ.
ರಾಜ್ಯದ ಬಿಜೆಪಿ, ಕಾಂಗ್ರೆಸ್ ನೇತೃತ್ವ ಕೇಂದ್ರ ಸರ್ಕಾರದ ಭ್ರಷ್ಟ ಆಡಳಿತದಿಂದ ಬೇಸತ್ತು ಜನತೆ ಈ ಬಾರಿ ಜೆಡಿಎಸ್ ಬೆಂಬಲಿಸುವುದರಲ್ಲಿ ಅನುಮಾವೇ ಇಲ್ಲ. ತಾವು ಅಧಿಕಾರಕ್ಕೆ ಬಂದಲ್ಲಿ ಪಟ್ಟಣದಲ್ಲಿ ನಾಲ್ಕು ಪಥದ ರಸ್ತೆ, 50 ಎಕರೆ ಪ್ರದೇಶದಲ್ಲಿ ಸಾವಿರಾರು ಆಶ್ರಯ ನಿವೇಶನ ವಿತರಣೆ, ಪಟ್ಟಣದಾದ್ಯಂತ ನಿರಂತರ ಕುಡಿಯುವ ನೀರಿನ ವ್ಯವಸ್ಥೆ, ತಾಲೂಕಿನ ಗ್ರಾಮಾಂತರ ಪ್ರದೇಶದ ಸಮಗ್ರ ಅಭಿವೃದ್ಧಿಗೆ ಹಲವು ಯೋಜನೆಗಳನ್ನು ಹಾಕಿಕೊಂಡು ನಿಗದಿತ ಅವಧಿಯೊಳಗೆ ಪೂರ , ಗೊಳಿಸಾಗುವುದೆಂದರು.
ಕೊತ್ತಗೆರೆ ಗ್ರಾಪಂ ಮಾಜಿ ಅಧ್ಯಕ್ಷ, ಬಿಜೆಪಿ ಮುಖಂಡ ನಾರಾಯಣ, ಪಟ್ಟಣದ ಕಾಂಗ್ರೆಸ್ ಮುಖಂಡರಾದ ಗುತ್ತಿಗೆದಾರ ಕಿಟ್ಟಿ, ಪುರಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ರತ್ನಮ್ಮ ಇತರರು ಮಾಜಿ ಸಚಿವರ ಸಮ್ಮುಖದಲ್ಲಿ ಜೆಡಿಎಸ್ಗೆ ಸೇರ್ಪಡೆಗೊಂಡರು.