ಮೇ 1ರಂದು ಪಟ್ಟಣಕ್ಕೆ ಎಚ್ಡಿಕೆ: ತಿಮ್ಮರಾಯಪ್ಪ
ಪಾವಗಡ: ಚುನಾವಣೆ ಪ್ರಚಾರದ ಹಿನ್ನೆಲೆಯಲ್ಲಿ ಮೇ 1ರಂದು ಬೆಳಗ್ಗೆ 10 ಗಂಟೆಗೆ ಜೆಡಿಎಸ್ ರಾಜ್ಯಾಧ್ಯಕ್ಷ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಪಾವಗಡ ಪಟ್ಟಣಕ್ಕೆ ಆಗಮಿಸಿ ಪ್ರಚಾರ ಭಾಷಣ ಮಾಡಲಿದ್ದಾರೆ ಎಂದು ಮಾಜಿ ಶಾಸಕ, ಜೆಡಿಎಸ್ ಅಭ್ಯರ್ಥಿ ಕೆ.ಎಂ.ತಿಮ್ಮರಾಯಪ್ಪ ತಿಳಿಸಿದರು.
ಅವರು ಶುಕ್ರವಾರ ಪಟ್ಟಣದ ಬನಶಂಕರಿಯಲ್ಲಿರುವ ಜೆಡಿಎಸ್ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕುಮಾರಸಾಮಿ ಜತೆಯಲ್ಲಿ ಜಿಲ್ಲಾಧ್ಯಕ್ಷ ಎಂ.ಆರ್. ಹುಲಿನಾಯ್ಕರ್ ಸೇರಿದಂತೆ ರಾಜ್ಯ ಹಾಗೂ ಜಿಲ್ಲಾ ಮುಖಂಡರು ಆಗಮಿಸಲಿರುವುದಾಗಿ ಅವರು ತಿಳಿಸಿದರು.
ಎಚ್.ಡಿ.ಕುಮಾರಸ್ವಾಮಿ ಆಗಮನದ ಹಿನ್ನೆಲೆಯಲ್ಲಿ ತಾಲೂಕಿನಾದ್ಯಂತ ರೈತರು, ಅಲ್ಪಸಂಖ್ಯಾತರು, ನಿರ್ಗತಿಕರು ಸೇರಿದಂತೆ ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮಕ್ಕೆ ಆಗಮಿಸುವಂತೆ ಅವರು ಮನವಿ ಮಾಡಿದ್ದಾರೆ.
ಈ ಸಂದರ್ಭದಲ್ಲಿ ಪಕ್ಷದ ತಾ.ಅಧ್ಯಕ್ಷ ಎನ್.ತಿಮ್ಮಾರೆಡ್ಡಿ, ಪ್ರಧಾನ ಕಾರ್ಯದರ್ಶಿ ಗೋವಿಂದಬಾಬು, ಮುಖಂಡರಾದ ಬಲರಾಮರೆಡ್ಡಿ, ಪ್ರಸಾದ್‌ರೆಡ್ಡಿ ಮುಂತಾದವರಿದ್ದರು.