ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

'ಸ್ವಾರ್ಥಕ್ಕಾಗಿ ಪರಮೇಶ್ವರ್ ರಾಜಕೀಯ ಮಾಡೊಲ್ಲ'

Vishwanath S
Updated On : 28 Apr 2013, 12:21 pm

ಕ.ಪ್ರ.ವಾರ್ತೆ  ,   ತುಮಕೂರು  ,   ಏ.27
ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್ ಅವರು ಎಂದೂ ಸ್ವಾರ್ಥಕ್ಕಾಗಿ ರಾಜಕೀಯ ಮಾಡೋದಿಲ್ಲ ಎಂದು ಮಾಜಿ ಸಂಸದ ಹಾಗೂ ನಟ ಶಶಿಕುಮಾರ್ ಅಭಿಪ್ರಾಯಪಟ್ಟರು.
ಅವರು ಶನಿವಾರ ತುಮಕೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಪರಮೇಶ್ವರ್ ಜನಪರ ರಾಜಕಾರಣಿ. ಸ್ವಾರ್ಥಕ್ಕಾಗಿ ರಾಜಕಾರಣ ಮಾಡುವವರಲ್ಲಿ. ಈ ಹಿನ್ನೆಲೆಯಲ್ಲಿ ಅವರ ಪರ ಕೊರಟಗೆರೆಯಲ್ಲಿ ಮತಯಾಚಿಸಲು ಬಂದಿದ್ದೇವೆ ಎಂದು ತಿಳಿಸಿದರು.
ಕಾಂಗ್ರೆಸ್ ಈ ಬಾರಿ ಅಧಿಕಾರಕ್ಕೆ ಬರುವುದು ಖಚಿತ. ಇದರಲ್ಲಿ ಯಾವುದೇ ಅನುಮಾನ ಬೇಡ. ಬಿಜೆಪಿ ಸರ್ಕಾರ ಭ್ರಷ್ಟರ ಹಾಗೂ ಸುಳ್ಳರ ಸಂತೆ ಎಂದು ಹರಿಹಾಯ್ದರು.
ಸುದ್ದಿಗೋಷ್ಠಿಯಲ್ಲಿ ಹಾಜರಿದ್ದ ನಟಿ ಜಯಮಾಲಾ ಮಾತನಾಡಿ ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಏರುವುದು ಖಚಿತ. ನಾವು ಕಂಡ ಹಾಗೆ, ಸಮೀಕ್ಷೆಗಳು ಹೇಳುವ ಹಾಗೆ ಕಾಂಗ್ರೆಸ್ ಸರ್ಕಾರ ರಚಿಸಲಿದೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement