ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ಮ್ಯಾನೇಜ್ಮೆಂಟ್ ಫೆಸ್ಟ್

Rashmi Kasaragodu
Updated On : 1 May 2013, 12:13 pm

ಕನ್ನಡಪ್ರಭ ವಾರ್ತೆ   ತುಮಕೂರು   ಏ.30
ಇಲ್ಲಿನ ಶ್ರೀದೇವಿ ತಾಂತ್ರಿಕ ಮಹಾವಿದ್ಯಾಲಯದ ಎಂಬಿಎ ವಿಭಾಗದ ವತಿಯಿಂದ ರಾಜ್ಯ ಮಟ್ಟದ ಒಂದು ದಿನದ ಮ್ಯಾನೇಜ್ಮೆಂಟ್ ಫೆಸ್ಟ್ ಕಾರ್ಯಕ್ರಮ ಆಯೋಜಿಸಲಾಗಿತ್ತು.ಪೆನ್ನಾ ಸಿಮೆಂಟ್ ಇಂಡಸ್ಟ್ರೀಸ್ನ ಮಾರ್ಕೆಟಿಂಗ್ ಮ್ಯಾನೇಜರ್ ಕೆ.ಎಂ. ಭಾಷಾ ಕಾರ್ಯಕ್ರಮ ಉದ್ಘಾಟಿಸಿ ಇಂತಹ ಫೆಸ್ಟ್ಗಳು ಮ್ಯಾನೇಜ್ಮೆಂಟ್ ವಿದ್ಯಾರ್ಥಿಗಳಲ್ಲಿ ಕೌಶಲ್ಯ ಬೆಳೆಯಲು ಸಹಕಾರಿಯಾಗಿದೆ. ಹಾಗೆಯೇ ಇದು ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವನೆ ಬೆಳೆಸುತ್ತದೆ ಎಂದರು.ಮುಖ್ಯ ಅತಿಥಿಯಾಗಿ ಶ್ರೀದೇವಿ ಚಾರಿಟಬಲ್ ಟ್ರಸ್ಟಿಗಳಾದ ಡಾ. ರಮಣ ಹುಲಿನಾಯ್ಕರ್ ಮತ್ತು ಡಾ. ಕೆ. ಕಾಶಿನಾಥ್ ಶಾಸ್ತ್ರಿ ಪಾಲ್ಗೊಂಡಿದ್ದರು. ಅಧ್ಯಕ್ಷತೆಯನ್ನು ವಿಭಾಗದ ಮುಖ್ಯಸ್ಥ ಡಾ. ಕೆ.ಎಸ್. ರಾಮಕೃಷ್ಣ ವಹಿಸಿದ್ದರು.ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಶ್ರೀದೇವಿ ಚಾರಿಟಬಲ್ ಟ್ರಸ್ಟ್ನ ಟ್ರಸ್ಟಿಗಳಾದ ಗಂಗಾಧರ ಕೊಡ್ಲಿ ಭಾಗವಹಿಸಿದ್ದರು. ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದ ಅಭ್ಯರ್ಥಿಗಳಿಗೆ ನಗದು ಬಹುಮಾನ ಮತ್ತು ಪಾರಿತೋಷಕ ನೀಡಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement