ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

27ವರ್ಷ ಶಿಕ್ಷಕಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಗಾಯತ್ರಿಗೆ ಸನ್ಮಾನ

Srinivasa Murthy VN
Updated On : 5 Aug 2013, 12:55 pm

ಹುಳಿಯಾರು: ಇಲ್ಲಿನ ವಾಸವಿ ವಿದ್ಯಾಸಂಸ್ಥೆಯ ಟಿ.ಎಸ್.ಆರ್.ಎಸ್.ಶಾಲೆಯಲ್ಲಿ 27 ವರ್ಷ ಕನ್ನಡ ಹಾಗೂ ಹಿಂದಿ ಶಿಕ್ಷಕಿಯಾಗಿ, ಮುಖ್ಯ ಶಿಕ್ಷಕಿಯಾಗಿ ಸೇವೆ ಸಲ್ಲಿಸಿ ಈಗ ನಿವೃತ್ತರಾದ ಗಾಯತ್ರಿ ಅವರನ್ನು ಶಾಲೆಯ ಕಾರ್ಯಕಾರಿ ಮಂಡಳಿ ಹಾಗೂ ಪಟ್ಟಣದ ವಿವಿಧ ವಾಸವಿ ಸಂಘ ಸಂಸ್ಥೆಯವರು ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಶಾಲೆಯ ಗೌರವಾಧ್ಯಕ್ಷ ಶ್ರಿನಿವಾಸಶೆಟ್ಟಿ ಅವರು ಮಾತನಾಡಿ, ತಮ್ಮ ಶಾಲೆಗೆ ಮೊದಲು ಸಹಶಿಕ್ಷಕಿಯಾಗಿ ಸೇರ್ಪಡೆಯಾದ ಗಾಯತ್ರಿ ಅವರು ಶಾಲೆಯ ಬೆಳವಣಿಗೆಗಾಗಿ ಶ್ರಮಿಸಿದ್ದಾರೆ. ಮಕ್ಕಳಿಗೆ ಉತ್ತಮ ಬೋಧನೆ ನೀಡುತ್ತಾ ಮುಖ್ಯ ಶಿಕ್ಷಕಿಯಾಗಿ ಬಡ್ತಿ ಹೊಂದಿ ಶಾಲೆಯ ಸಂಪೂರ್ಣ ಜವಬ್ದಾರಿಯನ್ನು ಹೊತ್ತು ಸಾಗಿ, 27ವರ್ಷಗಳ ಕಾಲ ತಮ್ಮ ಸೇವೆಯನ್ನು ಈ ಶಾಲೆಗಾಗಿ ಮೀಸಲಿಟ್ಟು ಈಗ ನಿವೃತ್ತಿ ಹೊಂದಿದ್ದಾರೆ. ಇದು ಹೆಮ್ಮೆ ಪಡುವಂತಹ ಸಂಗತಿ ಎಂದರು. ಇದೇ ನಿಟ್ಟಿನಲ್ಲಿ ಪ್ರತಿಯೊಬ್ಬ ಶಿಕ್ಷಕರು ನಡೆಯಬೇಕಿದ್ದು, ನೂತನ ಮುಖ್ಯ ಶಿಕ್ಷಕರಾಗಿ ನೇಮಕಗೊಂಡ ರಮೇಶ್ ಅವರು ಸಹ ಶಾಲೆಯನ್ನು ಉತ್ತಮ ರೀತಿಯಲ್ಲಿ ಬೆಳೆಸುತ್ತಾರೆಂದು ಆಶಿಸಿದರು.
ಈ ಸಂದರ್ಭದಲ್ಲಿ ವಾಸವಿ ವಿದ್ಯಾಸಂಸ್ಥೆಯ ಅಧ್ಯಕ್ಷ ಲಕ್ಷ್ಮಿಕಾಂತ್, ಸಹಕಾರ್ಯದರ್ಶಿ ರಾಮನಾಥ್, ಎಲ್.ಆರ್. ಚಂದ್ರಶೇಖರ್, ಸಂಸ್ಥೆಯ ನಿರ್ದೇಶಕರಾದ ಶ್ರೀನಿವಾಸ್, ಅಜಯ್, ಜ್ಯೋತಿನಾಗರಾಜು, ಶಿಕ್ಷಕರಾದ ಗಂಗಾಧರ್, ಮಂಜುನಾಥ್ ಸೇರಿದಂತೆ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement