ಇಂದು ವಿದ್ಯಾರ್ಥಿ ಸಂಘಗಳ ಉದ್ಘಾಟನಾ ಸಮಾರಂಭ
ತಿಪಟೂರು: ನಗರದ ಎಸ್.ವಿ.ಪಿ ಸಂಯುಕ್ತ ಪದವಿ ಪೂರ್ವ ಕಾಲೇಜು, ಎನ್.ಎಸ್.ಎಂ. ಬಾಲಿಕಾ ಪ್ರೌಢಶಾಲೆ ಹಾಗೂ ಎಸ್.ವಿ.ಪಿ ಪ್ರಾಥಮಿಕ ಪಾಠಶಾಲೆಗಳ ಸಂಯುಕ್ತಾಶ್ರಯದಲ್ಲಿ ವಿದ್ಯಾರ್ಥಿ ಸಂಘಗಳ ಉದ್ಘಾಟನಾ ಸಮಾರಂಭವು ಮಂಗಳವಾರ ಬೆಳಿಗ್ಗೆ 10ಗಂಟೆಗೆ ಎಸ್.ವಿ.ಪಿ ಕಾಲೇಜಿನ ಆವರಣದಲ್ಲಿ ಏರ್ಪಡಿಸಲಾಗಿದೆ. ಅಧ್ಯಕ್ಷತೆಯನ್ನು ಸಾಹಿತಿ ಪ್ರೊ ಸಿ.ಎಚ್. ಮರಿದೇವರು ವಹಿಸಲಿದ್ದು, ಉದ್ಘಾಟನೆಯನ್ನು ಶಾಸಕ ಕೆ. ಷಡಕ್ಷರಿ ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಪ್ರಾಧ್ಯಾಪಕ ಡಾ.ಡಿ.ವಿ.ಪರಮಶಿವಮೂರ್ತಿ, ಶ್ರೀ ವಿದ್ಯಾಪೀಠದ ಸಂಸ್ಥಾಪಕರಾದ ಎಸ್.ಕೆ.ರಾಜಶೇಖರ್, ಸುಮತಿ ವಿದ್ಯಾಸಂಸ್ಥೆಯ ಅಧ್ಯಕ್ಷ ಎಸ್.ಮಲ್ಲಿಕಾರ್ಜುನಯ್ಯ ಮತ್ತಿತರರು ಭಾಗವಹಿಸಲಿದ್ದಾರೆ.
ಇಂದು ಉದ್ಘಾಟನಾ ಸಮಾರಂಭ
ತಿಪಟೂರು: ನಗರದ ಕಲ್ಪತರು ವಿದ್ಯಾ ಸಂಸ್ಥೆಯ ಕಲ್ಪತರು ಪದವಿ ಪೂರ್ವ ಕಾಲೇಜಿನ ಶೈಕ್ಷಣಿಕ ವರ್ಷದ ಸಾಂಸ್ಕೃತಿಕ ವೇದಿಕೆ, ರಾಷ್ಟ್ರೀಯ ಸೇವಾ ಯೋಜನೆ, ಎನ್.ಸಿ.ಸಿ., ಆಪ್ತ ಸಲಹಾ ಕೇಂದ್ರ ಮತ್ತು ಕ್ರೀಡಾ ಚಟುವಟಿಕೆಗಳ ಉದ್ಘಾಟನಾ ಸಮಾರಂಭವನ್ನು ಮಂಗಳವಾರ ಬೆ. 10.30ಕ್ಕೆ ಕಾಲೇಜಿನ ಆಡಿಟೋರಿಯಂನಲ್ಲಿ ಹಮ್ಮಿಕೊಳ್ಳಲಾಗಿದೆ. ಅಧ್ಯಕ್ಷತೆಯನ್ನು ಬಸವಯ್ಯ ವಹಿಸಲಿದ್ದು, ಉದ್ಘಾಟನೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜಯಪ್ರಕಾಶ್ ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಾಹಿತಿ ಚಟ್ನಹಳ್ಳಿ ಮಹೇಶ್ ಸೇರಿದಂತೆ ಕೆವಿಎಸ್ ಎಲ್ಲಾ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ.
ಇಂದು ಚುನಾವಣೆ ತರಬೇತಿ
ತುಮಕೂರು: ತುಮಕೂರು ಜಿಲ್ಲೆಯಲ್ಲಿ ಮೊದಲ ಹಂತದಲ್ಲಿ 137 ಹಾಲು ಉತ್ಪಾದಕರ ಸಹಕಾರ ಸಂಘಗಳ ಚುನಾವಣೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಆ. 6 ರಂದು ಬೆಳಿಗ್ಗೆ 10 ಗಂಟೆಗೆ ತುಮಕೂರು ಧಾನ್ಯ ವರ್ತಕರ ಸಹಕಾರ ಬ್ಯಾಂಕ್ನಲ್ಲಿ ಸಂಬಂಧಪಟ್ಟ ಚುನಾವಣಾಧಿಕಾರಿಗಳು ಹಾಗೂ ಸಂಘಗಳ ಕಾರ್ಯನಿರ್ವಹಣಾಧಿಕಾರಿಗಳಿಗೆ ಒಂದು ದಿನದ ಚುನಾವಣಾ ತರಬೇತಿ ಆಯೋಜಿಸಲಾಗಿದೆ. ಸದರಿ ತರಬೇತಿಗೆ ಸಂಬಂಧಪಟ್ಟ ಚುನಾವಣಾಧಿಕಾರಿಗಳು ಹಾಗೂ ಸಂಘಗಳ ಕಾರ್ಯನಿರ್ವಹಣಾಧಿಕಾರಿಗಳು ಹಾಜರಾಗುವಂತೆ ಜಿಲ್ಲಾ ಸಹಕಾರ ಸಂಘಗಳ ಚುನಾವಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇಫ್ತಾರ್ ಕೂಟ
ತುಮಕೂರು: ತುಮಕೂರಿನ ಶಿರಾನಿ ರಸ್ತೆ ಹಿಂಭಾಗದಲ್ಲಿರುವ ಷಾದಿ ಮಹಲ್ನಲ್ಲಿ ರಂಜಾನ್ ಹಿನ್ನೆಲೆಯಲ್ಲಿ ಇಪ್ತಾರ್ ಕೂಟ ಆಯೋಜಿಸಲಾಗಿತ್ತು. ತುಮಕೂರು ನಗರ ಶಾಸಕ ಡಾ. ರಫೀಕ್ ಅಹಮದ್, ಸಂಸ್ಥೆಯ ಅಧ್ಯಕ್ಷರಾದ ನಯಾಜ್ ಅಹಮದ್, ಕಾರ್ಯದರ್ಶಿ ಅಯಾಜ್ ಅಹಮದ್, ಸದಸ್ಯರರಾದ ಶಬ್ಬೀರ್ ಅಹಮದ್, ಮುಸ್ತಪಾ, ಅಬ್ದುಲ್ ರಷೀದ್, ಸೈಯದ್ ರಫೀ ಇತರರು ಉಪಸ್ಥಿತರಿದ್ದರು.