ಪ್ರತಿಭಾ ಪುರಸ್ಕಾರ, ಅಭಿನಂದನಾ ಸಮಾರಂಭ
ಕ,ಪ್ರ,ವಾರ್ತೆ ಮಧುಗಿರಿ ಆ.5
ಪಟ್ಟಣದ ವಿಪ್ರ ಯುವ ವೇದಿಕೆ ಆಶ್ರಯದಲ್ಲಿ ಆ.7ರ ಬುಧವಾರ 9 ಗಂಟೆಗೆ ಪ್ರತಿಭಾ ಪುರಸ್ಕಾರ ಹಾಗೂ ಅಭಿನಂದನಾ ಸಮಾರಂಭ ಏರ್ಪಡಿಸಲಾಗಿದೆ ಎಂದು ಅಧ್ಯಕ್ಷ ಬಿ.ಆರ್.ಸತ್ಯನಾರಾಯಣ ಹಾಗೂ ಕಾರ್ಯದರ್ಶಿ ವಿನಯ ಶರ್ಮ ತಿಳಿಸಿದ್ದಾರೆ.
ಇಲ್ಲಿನ ನೌಕರರ ಭವನದಲ್ಲಿ ನಡೆಯಲಿರುವ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳಿಸಿ ಉತ್ತೀರ್ಣರಾದ ವಿಪ್ರ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಶಾಸಕ ಕೆ.ಎನ್.ರಾಜಣ್ಣ ಅವರಿಗೆ ಅಭಿನಂದನಾ ಸಮಾರಂಭ ಏರ್ಪಡಿಸಿದೆ.
ತಗ್ಗಿಹಳ್ಳಿ ಶ್ರೀರಾಮಕೃಷ್ಣಾಶ್ರಮದ ಸ್ವಾಮಿ ರಮಾನಂದ ಚೈತನ್ಯರು ದಿವ್ಯ ಸಾನಿದ್ಯ ವಹಿಸುವರು. ಶ್ರೀಶಂಕರ ಸೇವಾ ಸಮಿತಿ ಅಧ್ಯಕ್ಷ ವಿದ್ವಾನ್ ನಾಗರಾಜಶಾಸ್ತ್ರಿ, ಬೆಂಗಳೂರು ಕೆಎಚ್ಎಂಡಿ ಕಂಪನಿಯ ಜನರಲ್ ಮ್ಯಾನೇಜರ್ ಟಿ.ಎಂ. ಶಿವರಾಂ, ತಾ.ಕಸಾಪ ಅಧ್ಯಕ್ಷ ಚಿ.ಸೂ.ಕೃಷ್ಣಮೂರ್ತಿ ಭಾಗವಹಿಸುವರು. ವಿಪ್ರ ಯುವ ವೇದಿಕೆ ಅಧ್ಯಕ್ಷ ಬಿ.ಆರ್. ಸತ್ಯನಾರಾಯಣ ಸಮಾರಂಭದ ಅಧ್ಯಕ್ಷತೆ ವಹಿಸುವರು. ಹಾಗಾಗಿ ಎಲ್ಲ ವಿಪ್ರ ಬಾಂಧವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದ್ದಾರೆ.