ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ತಾಲೂಕು ಮಟ್ಟಕ್ಕೆ ಆಯ್ಕೆ

Rashmi Kasaragodu
Updated On : 8 Aug 2013, 12:28 pm

ಶಿರಾ: ಇಲ್ಲಿ ನಡೆದ ಹೋಬಳಿ ಮಟ್ಟದ ಪ್ರಾಥಮಿಕ ಶಾಲಾ ಕ್ರೀಡಾಕೂಟದಲ್ಲಿ ಪಟ್ಟಣದ ಬಾಲಾಜಿನಗರದಲ್ಲಿರುವ ಮಂಜುಶ್ರೀ ಶಾಲಾ ಬಾಲಯಕಿಯರು ವಾಲಿಬಾಲ್ನಲ್ಲಿ ಪ್ರಥಮ, ಬಾಲ್ಬ್ಯಾಡ್ಮಿಂಟನ್ನಲ್ಲಿ ಪ್ರಥಮ ಹಾಗೂ ಬಾಲಕರ ಶಟಲ್ ಬ್ಯಾಡ್ಮಿಂಟನ್ನಲ್ಲಿ ಪ್ರಥಮ ಸ್ಥಾನ ಗಳಿಸಿ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಎಂದು ಮುಖ್ಯ ಶಿಕ್ಷಕಿ ಸುಧಾ ಅವರು ತಿಳಿಸಿದ್ದಾರೆ. ಶಾಲಾ ಮಕ್ಕಳ ಸಾಧನೆಗೆ ಆಡಳಿತಾಧಿಕಾರಿ ಚಂದ್ರಪ್ಪ, ಗೌರವ ಕಾರ್ಯದರ್ಶಿ ಡಾ.ಎಸ್.ಎಂ.ಉಮೇಶ್, ದೈಹಿಕ ಶಿಕ್ಷಕ ರಮೇಶ್, ಹೇಮಂತ್ ಮತ್ತಿತರ ಸಿಬ್ಬಂದಿ ಅಭಿನಂದಿಸಿದ್ದಾರೆ.
ಕಾನೂನು ಅರಿವು ನೆರವು ಕಾರ್ಯಾಗಾರ
ಶಿರಾ: ತಾಲೂಕಿನ ಕಳ್ಳಂಬೆಳ್ಳ ಗ್ರಾಮದಲ್ಲಿ ಆ. 8 ರಂದು ಶಿಕ್ಷಕರು ಮತ್ತು ಜನಸಾಮಾನ್ಯರಿಗಾಗಿ ಕಾನೂನು ಅರಿವು ನೆರವು ಕಾರ್ಯಾಗಾರ ನಡೆಯುತ್ತದೆ. ಕಳ್ಳಂಬೆಳ್ಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ನಡೆಯುವ ಈ ಕಾರ್ಯಾಗಾರವನ್ನು ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶರಾದ ಆರ್.ರವಿ ಉದ್ಘಾಟಿಸುವರು. ಬಿ.ಇ.ಓ. ರಾಜ್ಕುಮಾರ್ ಅಧ್ಯಕ್ಷತೆ ವಹಿಸುವರು. ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಟಿ.ಗೋವಿಂದಯ್ಯ, ವಕೀಲರ ಸಂಘದ ಅಧ್ಯಕ್ಷ ಭೂಪತಿಗೌಡ ಮತ್ತಿತರರು ಹಾಜರಿರುವರು.
ಸೋಲು ಗೆಲವು ನಾಣ್ಯದ ಎರಡು ಮುಖಗಳಿದ್ದಂತೆ
ತಿಪಟೂರು: ಕ್ರೀಡೆಯಲ್ಲಿ ಸೋಲು ಗೆಲವು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಇವುಗಳನ್ನು ಸಮಾನ ಮನೋಭಾವದಿಂದ ಕಂಡಾಗ ಮಾತ್ರ ಕ್ರೀಡೆಯಲ್ಲಿ ಭಾಗವಹಿಸಲು ಸಾಧ್ಯವಾಗುತ್ತದೆ ಎಂದು ಕೆರೆಗೋಡಿ-ರಂಗಾಪುರ ಸುಕ್ಷೇತ್ರಾಧ್ಯಕ್ಷರಾದ ಶ್ರೀ ಗುರುಪರದೇಶಿಕೇಂದ್ರ ಸ್ವಾಮೀಜಿ ತಿಳಿಸಿದರು. ತಾಲೂಕಿನ ಹೆಡಗರಹಳ್ಳಿ ಡಾ. ಅಂಬೇಡ್ಕರ್ ಗ್ರಾಮಾಂತರ ಪ್ರೌಢಶಾಲೆ ಕ್ರೀಡಾಂಗಣದಲ್ಲಿ 2 ದಿನಗಳ ಕಾಲ ನಡೆದ ತಾಲೂಕು ಮಟ್ಟದ ಪ್ರೌಢಶಾಲೆಗಳ ಕ್ರೀಡಾಕೂಟದ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದ ಶ್ರೀಗಳು ಇಂದಿನ ದಿನಗಳಲ್ಲಿ ಕ್ರೀಡೆಯಲ್ಲಿ ಭಾಗವಹಿಸುವವರ ಸಂಖ್ಯೆ ಕಡಿಮೆಯಾಗುತ್ತಿದ್ದು, ಕ್ರೀಡೆಗಳಲ್ಲಿ ಭಾಗವಹಿಸಲು ಹಿಂಜರಿಯುವುದು ಸರಿಯಲ್ಲ. ಧೈರ್ಯ ಮತ್ತು ಉತ್ಸಾಹದಿಂದ ಕ್ರೀಡೆಗಳಲ್ಲಿ ಅವಕಾಶ ಸಿಕ್ಕಾಗ ಭಾಗವಹಿಸಬೇಕೆಂದು ತಿಳಿಸಿದರು. ತಾಲೂಕು ಮಟ್ಟದಿಂದ ರಾಷ್ಚ್ರ ಮಟ್ಟದವರೆಗೂ ಭಾಗವಹಿಸಿ ವಿಜೇತರಾಗಿ ಶಾಲೆಗಳಿಗೆ ಕೀರ್ತಿ ತಂದುಕೊಡಬೇಕೆಂದು ಕ್ರೀಡಾಪಟುಗಳಿಗೆ ಪ್ರೋತ್ಸಾಹಿಸಿದರು.  ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದ ಶಾಸಕ ಕೆ.ಷಡಕ್ಷರಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕ್ರೀಡೆಯ ಮಹತ್ವ  ಅರಿತು ಪ್ರಾಥಮಿಕ ಶಿಕ್ಷಣದಿಂದಲೇ ಕ್ರೀಡೆಗೆ ಹೆಚ್ಚಿನ ಮಹತ್ವ ನೀಡುತ್ತಾ ಬಂದಿವೆ. ಎಂದರು. ರಂಗಾಪುರ ಎಸ್.ಪಿ.ಎಸ್. ವಿದ್ಯಾಸಂಸ್ಥೆಯ ಆಡಳಿತಾಧಿಕಾರಿ ಭದ್ರಪ್ಪ, ಹೆಡಗರಹಳ್ಳಿ ಗ್ರಾ.ಪಂ. ಉಪಾಧ್ಯಕ್ಷೆ ಜಯಮಾಲ, ನಗರಸಭೆ ಸದಸ್ಯ ಸುಧಾಕರ್, ಎಚ್.ಎಸ್. ದಯಾನಂದ್, ಮಹದೇವಯ್ಯ ಇದ್ದರು

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement