ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ಕ್ರೀಡೆಗಳಲ್ಲಿ ಭಾಗವಹಿಸಿ: ಶಾಸಕರ ಕರೆ

Mainashree
Updated On : 9 Aug 2013, 11:46 am

ಮಧುಗಿರಿ:  ವಿದ್ಯಾರ್ಥಿಗಳು ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ದೈಹಿಕ ಹಾಗೂ ಮಾನಸಿಕ ಸಾಮರ್ಥ್ಯ ವೃದ್ಧಿಯಾಗುತ್ತದೆ ಎಂದು ಶಾಸಕ ಕೆ.ಎನ್.ರಾಜಣ್ಣ ತಿಳಿಸಿದರು.
ಕಸಬಾ ವ್ಯಾಪ್ತಿಯ  ಡಿ.ವಿ.ಹಳ್ಳಿ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಏರ್ಪಡಿಸಿದ್ದ ಗ್ರಾಮಾಂತರ ಪ್ರೌಢಶಾಲೆಗಳ ಹೋಬಳಿ ಮಟ್ಟದ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದ ಅವರು, ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳು ದೈಹಿಕವಾಗಿ ಸದೃಢರಾಗಿದ್ದು ಜತೆಗೆ ಸಾಧನೆ ಮಾಡುವ ನಿಟ್ಟಿನಲ್ಲಿ ಆತ್ಮವಿಶ್ವಾಸದಿಂದ ಉತ್ತಮ ಗುಣ ಮಟ್ಟದ ಶಿಕ್ಷಣ ಕಲಿತು ತಮ್ಮ ಭವಿಷ್ಯ ರೂಪಿಸಿಕೊಳ್ಳಬೇಕು. ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಂಡು ಮುಂದೆ ಬರುವಂತೆ ಸಲಹೆ ನೀಡಿದರು.
ಮುಖ್ಯ ಅತಿಥಿ ಡಿಡಿಪಿಐ ಟಿ.ಎಸ್.ಆಂಜನಪ್ಪ ವಿದ್ಯಾರ್ಥಿಗಳಿಗೆ ಆಟ-ಪಾಠ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ, ಆದ ಕಾರಣ ಕ್ರೀಡೆಗಳಿಂದ ಮಾನಸಿಕ ನೆಮ್ಮದಿ ಸಾಧ್ಯ ಎಂದರು. ತಾ.ಪಂ.ಅಧ್ಯಕ್ಷೆ ಯಶೋಧರಾಜಣ್ಣ, ಮುಖ್ಯ ಶಿಕ್ಷಕ ಹನುಮಂತರಾಯಪ್ಪ ಅಧ್ಯಕ್ಷತೆ ವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement