ಮಕ್ಕಳ ಸಾಹಿತ್ಯ ಪುಸ್ತಕ ಪ್ರದರ್ಶನ, ಮಾರಾಟ
ತುಮಕೂರು: ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಡಾ. ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ನವಕರ್ನಾಟಕ ಪ್ರಕಾಶನ, ಜ್ವಾಲಾಮಾಲಾ ಪುಸ್ತಕ ಪ್ರಕಾಶನ ಹಾಗೂ ನಮನ ಪುಸ್ತಕಾಲಯ ಸಂಸ್ಥೆಗಳಿಂದ ದೇಶಭಕ್ತರ, ಸ್ವಾತಂತ್ರ್ಯ ಹೋರಾಟಗಾರ ಮತ್ತು ಮಕ್ಕಳ ಸಾಹಿತ್ಯ ಪುಸ್ತಕಗಳ ಪ್ರದರ್ಶನ ಮತ್ತು ಮಾರಾಟ ವ್ಯವಸ್ಥೆಯನ್ನು ಮಾಡಲಾಗಿದೆ.
ಜೆ.ಡಿ.ಸ್ಕೂಲ್ ಆಫ್ ಆರ್ಟ್ಸ್ ಸಂಸ್ಥೆಯ ಮಕ್ಕಳಿಂದ ಚಿತ್ರಕಲೆ ಪ್ರದರ್ಶನ ಹಾಗೂ ಸಂಜೆ 4.30ಕ್ಕೆ ಶ್ರೀ ರಂಗಸ್ವಾಮಿ ಮತ್ತು ತಂಡ, ತುಮಕೂರು ಇವರಿಂದ ದೇಶಭಕ್ತಿಗೀತೆಗಳ ಕಾರ್ಯಕ್ರಮ ಸಂಜೆ 5.30ಕ್ಕೆ ಶಾಲಾ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ.
ಇದರಲ್ಲಿ 166 ಶಾಲೆಯ ಮಕ್ಕಳ ತಂಡಗಳು ಭಾಗವಹಿಸಲಿದ್ದು ಸಾರ್ವಜನಿಕರು, ಸಾಹಿತ್ಯಾಸಕ್ತರು, ಕಲಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ಕೋರಿದ್ದಾರೆ.