ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ಅಧಿಕಾರಿಗಳ ವಿರುದ್ಧ ಶಾಸಕ ರಫೀಕ್ ಅಹಮದ್ ಗರಂ

Rashmi Kasaragodu
Updated On : 15 Aug 2013, 12:37 pm

ಕ.ಪ್ರ.ವಾರ್ತೆ  ತುಮಕೂರು  ಆ. 14
ನಗರದ ವಿವಿಧ ಪ್ರದೇಶಗಳಿಗೆ ದಿಢೀರ್ ಭೇಟಿ ನೀಡಿದ ನಗರ ಕ್ಷೇತ್ರದ ಶಾಸಕ ರಫೀಕ್ ಅಹಮದ್ ಅವರು ನಗರ ಸಭೆ ಮತ್ತು ನಗರಾಭಿವೃದ್ಧಿ ಪ್ರಾಧಿಕಾರ ಅಧಿಕಾರಿಗಳ ಕಾರ್ಯ ವೈಖರಿಯ ವಿರುದ್ಧ ಗರಂ ಆದರು.
ನಗರದ ವೀರಸೌಧಕ್ಕೆ ಭೇಟಿ ನೀಡಿದ ಅವರು ಅಲ್ಲಿನ ಅವ್ಯವಸ್ಥೆಯನ್ನು ಕಂಡು ತೀವ್ರ ಅಸಮಾಧಾನ  ವ್ಯಕ್ತಪಡಿಸಿದರು. ತಕ್ಷಣವೇ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಿಗೆ ಕರೆ ಮಾಡಿ ವ್ಯವಸ್ಥೆಯನ್ನು ಸರಿಪಡಿಸುವಂತೆ ಸೂಚಿಸಿದರು. ಹಾಗೆಯೇ ವಾರ್ತಾ ಭವನದ ಮುಂಭಾಗದಲ್ಲಿಯೇ ರಸ್ತೆ ಪಕ್ಕದಲ್ಲಿ ಕಸ ಬಿದ್ದಿರುವುದನ್ನು ಗಮನಿಸಿದ ಶಾಸಕರು ನಗರಸಭೆ ಆಯುಕ್ತರಿಗೂ ಸಹ ಕರೆ ಮಾಡಿ ತಕ್ಷಣವೇ ಕಸ ವಿಲೇವಾರಿ ಮಾಡಲು ಕ್ರಮಕೈಗೊಳ್ಳುವಂತೆ ಸೂಚಿಸಿದರು.
ಶಾಸಕರ ಭೇಟಿ ಸಂದರ್ಭದಲ್ಲಿ ಹಾಜರಿದ್ದ ನಾಗರೀಕರು ನಗರದ ಅವ್ಯವಸ್ಥೆಯನ್ನು ಸರಿಪಡಿಸುವಂತೆ  ಆಗ್ರಹಿಸಿದರು. ಹಾಗೂ ನಗರಸಭೆಯ ಕಾರ್ಯವೈಖರಿಯ ಬಗ್ಗೆ ಬೇಸರ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ  ರಫೀಕ್ ಅಹಮದ್, ದೇಶಕ್ಕಾಗಿ ಹೋರಾಡಿದ  ಸ್ವಾತಂತ್ರ ಹೋರಾಟಗಾರರ ಹೆಸರಿನಲ್ಲಿ ಲಕ್ಷಾಂತರ ರು. ಮೌಲ್ಯದಲ್ಲಿ ನಿರ್ಮಿಸಿರುವ ಇಂತಹ ಕಟ್ಟಡವನ್ನು ನಿರ್ವಹಣೆ ಮಾಡದಿರುವುದರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.
ಕ್ರಮ ಖಚಿತ: ನಗರದಲ್ಲಿ ತ್ಯಾಜ್ಯ ವಿಲೇವಾರಿ ಸಮರ್ಪಕವಾಗಿ  ಆಗುತ್ತಿಲ್ಲ ಎಂದು ಅನೇಕ ದೂರುಗಳು ಬಂದಿದ್ದು, ಸಂಬಂಧಪಟ್ಟ ಅಧಿಕಾರಿಗಳಿಗೆ ಈಗಾಗಲ್ಲೇ ಸೂಚನೆ ನೀಡಿದ್ದೇನೆ. ಸೂಕ್ತ ಕ್ರಮಕೈ ಗೊಳ್ಳದಿದ್ದರೆ ಕ್ರಮಕೈಗೊಳ್ಳಲಾಗುವುದು ಎಂದರು.
ಮುಂದಿನ ಗಣರಾಜ್ಯೋತ್ಸವವನ್ನು ವೀರಸೌಧದಲ್ಲಿಯೇ ಆಚರಿಸಲು ಚಿಂತನೆ ನಡೆಸಲಾಗಿದೆ. ಆಚರಣೆ ಮಾಡುತ್ತೇವೆ ಎಂದು ಶಾಸಕ ರಫೀಕ್ ಅಹಮದ್ ವಿಶ್ವಾಸ ವ್ಯಕ್ತಪಡಿಸಿದರು.
ಬಸ್ ನಿಲ್ದಾಣದ ಡಿಪೋ ಕಾಮಗಾರಿಯನ್ನು ಇದೇ ಸಂದರ್ಭದಲ್ಲಿ ವೀಕ್ಷಿಸಿದ ಶಾಸಕ ಡಾ. ರಫೀಕ್ ಅಹಮದ್ ಕೆಲಸ ಚುರುಕುಗೊಳಿಸಲು ಸಂಬಂಧಪಟ್ಟವರಿಗೆ ಇದೇ ಸಂದರ್ಭದಲ್ಲಿ ಸೂಚಿಸಿದರು.
ವೀರಸೌಧ ಕಟ್ಟಡದ ಕಿಟಕಿ ಗಾಜುಗಳು ಪುಡಿಪುಡಿಯಾಗಿರುವುದನ್ನು ಗಮನಿಸಿದ ಶಾಸಕ ರಫೀಕ್ ಅಹಮದ್ ಈ ಕೂಡಲೇ ಇದನ್ನು ದುರಸ್ತಿ ಮಾಡಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು. ಬಾಳನಕಟ್ಟೆ ಬಳಿ ಬಿದ್ದಿದ್ದ ಕಸದ ರಾಶಿಯನ್ನು ಗಮನಿಸಿದ ಶಾಸಕರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಶಾಸಕರ ಜತೆ ನಗರಸಭೆ ಇಂಜಿನಿಯರ್, ಎಇಇ, ನಗರಾಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಹಾಗೂ ಇತರೆ ಇಲಾಖೆ ಅಧಿಕಾರಿಗಳು ಹಾಜರಿದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement