ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ಕಾರ್ಪ್ ರೈತ ಪ್ರಶಸ್ತಿಗೆ ಅರ್ಜಿ ಆಹ್ವಾನ

Rashmi Kasaragodu
Updated On : 15 Aug 2013, 12:37 pm

ತಿಪಟೂರು: ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯ ವತಿಯಿಂದ ನ.2ನೇ ವಾರದಲ್ಲಿ ನಡೆಯಲಿರುವ ಕೃಷಿ ಮೇಳದಲ್ಲಿ ಕಾರ್ಪೋರೇಷನ್ ಬಾಂಕ್ ಪ್ರಾಯೋಜಿತ ಕಾರ್ಪ್ ರೈತ ಪ್ರಶಸ್ತಿಯನ್ನು ಸಮಗ್ರ ಕೃಷಿ ಪದ್ಧತಿಯನ್ನು ಅಳವಡಿಸಿಕೊಂಡಿರುವ ಒಬ್ಬ ರೈತ ಹಾಗೂ ರೈತ ಮಹಿಳೆಗೆ ಆಯ್ಕೆ ಮಾಡಿ ಪ್ರಶಸ್ತಿ ಪತ್ರ ಹಾಗೂ ಹತ್ತು ಸಾವಿರ ರು. ನಗದು ನೀಡಲಾಗುವುದು. ಕಾರ್ಪ್ ರೈತ ಪ್ರಶಸ್ತಿಗೆ ಕೃಷಿ ವಿಶ್ವವಿದ್ಯಾನಿಲಯಕ್ಕೆ ಅರ್ಜಿ ಸಲ್ಲಿಸಲು ಸೆ. 30 ಕೊನೆಯ ದಿನಾಂಕ. ಅರ್ಜಿಯನ್ನು ಜಂಟಿ ನಿರ್ದೇಶಕರ ಕಚೇರಿ ಕೃಷಿ ಇಲಾಖೆ ತುಮಕೂರು ಇಲ್ಲಿ ಪಡೆಯಬಹುದು. ಹೆಚ್ಚಿನ ಮಾಹಿತಿಗಾಗಿ ತಿಪಟೂರು ಕೃಷಿ ವಿಜ್ಞಾನ ಕೇಂದ್ರ 08134-294771 ಅಥವಾ 9449866956 ಸಂಪರ್ಕಿಸಬಹುದು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement