ಸ್ವಾತಂತ್ರ್ಯ ದಿನದ ಪ್ರಯುಕ್ತ ಸ್ವಚ್ಛತಾ ಕಾರ್ಯಕ್ರಮ
ತಿಪಟೂರು: ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ತಾಲೂಕಿನ 22 ಸ್ಥಳಗಳಲ್ಲಿ ನಾಗರಿಕ ಪ್ರಜ್ಞೆ ಕಾರ್ಯಕ್ರಮಗಳನ್ನು ನಡೆಸಲಾಯಿತು. ಕಾರ್ಯಕ್ರಮದಲ್ಲಿ ಪರಿಸರ ಸಂರಕ್ಷಣೆ, ಪ್ಲಾಸ್ಟಿಕ್ ಬಳಕೆಯಿಂದ ಉಂಟಾಗುವ ಅನಾನುಕೂಲತೆಗಳು ಹಾಗೂ ಇತರ ದುಶ್ಚಟಗಳ ಬಗ್ಗೆ ಮಾಹಿತಿ ನೀಡಲಾಯಿತು. ಅಲ್ಲದೆ 3025 ಸದಸ್ಯರಿಂದ ಸ್ವಚ್ಛತಾ ಕಾರ್ಯಕ್ರಮಗಳನ್ನು ನಡೆಸಲಾಯಿತು. ತಾಲೂಕು ಯೋಜನಾಧಿಕಾರಿ ಪಿ,ಶ್ರೀನಿವಾಸ್, ವಲಯ ಮೇಲ್ವಿಚಾರಕರು, ತಾಂತ್ರಿಕ ಸಿಬ್ಬಂದಿಗಳು ಮತ್ತು ಸೇವಾ ಪ್ರತಿನಿಧಿಗಳು ಭಾಗವಹಿಸಿದ್ದರು.