ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ತಿಗಳರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಪೂರ್ವಭಾವಿ ಸಭೆ

Rashmi Kasaragodu
Updated On : 17 Aug 2013, 12:58 pm

ಮಧುಗಿರಿ:  ತಾಲೂಕು ತಿಗಳರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಆ.28 ರಂದು ತಿಗಳ ಜನಾಂಗದ ವಿದ್ಯಾರ್ಥಿ ನಿಲಯದ ಶಂಕುಸ್ಥಾಪನೆ ಹಾಗೂ ಮಧುಗಿರಿ ಕ್ಷೇತ್ರದ ಶಾಸಕ ಕೆ.ಎನ್.ರಾಜಣ್ಣ ಅವರಿಗೆ ಸನ್ಮಾನ ಸಮಾರಂಭ ಕಾರ್ಯಕ್ರಮ ಹಮ್ಮಿಕೊಳ್ಳುವ ಬಗ್ಗೆ ಆ.19 ರ ಸೋಮವಾರ 12 ಗಂಟೆಗೆ ರಾಜ್ಯ ತಿಗಳರ ಸಂಘದ ಗೌರವಾಧ್ಯಕ್ಷ ರೇವಣ್ಣಸಿದ್ದಯ್ಯ ಅವರ ಅಧ್ಯಕ್ಷತೆಯಲ್ಲಿ ಮಧುಗಿರಿ ಪಟ್ಟಣದ ಮಾಲಿಮರಿಯಪ್ಪ ರಂಗಮಂದಿರದಲ್ಲಿ ಪೂರ್ವ ಭಾವಿ ಸಭೆ ಕರೆಯಲಾಗಿದೆ. ತಾಲೂಕಿನ ಎಲ್ಲ ತಿಗಳ ಜನಾಂಗದ ಮುಖಂಡರು, ಕಾರ್ಯಕರ್ತರು  ಈ ಸಭೆಗೆ ಆಗಮಿಸಿ ತಮ್ಮ ಸಲಹೆ ಸೂಚನೆ ನೀಡಿ ಸಭೆಯನ್ನು ಯಶಸ್ವಿಗೊಳಿಸಬೇಕು ಎಂದು ಅಧ್ಯಕ್ಷ  ಎಚ್.ಟಿ. ರಾಮಕೃಷ್ಣಯ್ಯ ಮನವಿ ಮಾಡಿದ್ದಾರೆ.  
ಮಾರುಗೊಂಡನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ
ತಿಪಟೂರು: ತಾಲೂಕಿನ ಕಸಬಾ ಹೋಬಳಿ ಮಾರುಗೊಂಡನಹಳ್ಳಿಯ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ 67ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.  ಗ್ರಾ.ಪಂ. ಸದಸ್ಯರಾದ ದಾಸಪ್ಪ ಧ್ವಜಾರೋಹಣ ನೆರವೇರಿಸಿದರು. ಅಧ್ಯಕ್ಷತೆಯನ್ನು ಎಸ್.ಡಿ.ಎಂ.ಸಿ ಅಧ್ಯಕ್ಷ ಕುಮಾರಯ್ಯ ವಹಿಸಿದ್ದರು. ಮಾಜಿ ಗ್ರಾ.ಪಂ ಸದಸ್ಯ ಕುಮಾರಯ್ಯ, ಬಸವೇಗೌಡರು, ಎಂ.ಜಿ. ರವೀಶ್, ಲೋಕೇಶ್, ಚಿಕ್ಕಣ್ಣ ಹಾಗೂ ಸ್ತ್ರೀಶಕ್ತಿ ಸಂಘಗಳ ಸದಸ್ಯರುಗಳು ಭಾಗವಹಿಸಿದ್ದರು.  ಈ ಸಂದರ್ಭದಲ್ಲಿ ನಿವೃತ್ತ ಮುಖ್ಯ ಶಿಕ್ಷಕ ಓಬಯ್ಯ ಇವರನ್ನು ಸನ್ಮಾನಿಸಲಾಯಿತು. ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಆಟೋಟಗಳಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಮುಖ್ಯ ಶಿಕ್ಷಕ ಬಿ.ಎಸ್. ಲಿಂಗರಾಜು ಸ್ವಾಗತಿಸಿ, ಸಹ ಶಿಕ್ಷಕ ಹನುಮಪ್ಪ ನಿರೂಪಿಸಿ, ಅಂಗನವಾಡಿ ಕಾರ್ಯಕರ್ತೆ ಎನ್.ಡಿ.ಶಮಂತ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement