ಲೋಕಾಯುಕ್ತ ವಿಚಾರಣೆ ಮುಂದಕ್ಕೆ
ತುಮಕೂರು: ಬೆಂಗಳೂರು ಗ್ರಾಮಾಂತರ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ತುಮಕೂರು, ಕುಣಿಗಲ್ ಮತ್ತು ಗುಬ್ಬಿ ತಾಲೂಕುಗಳಿಗೆ ಸಂಬಂಧಿಸಿದ ಲೋಕಾಯುಕ್ತ ಪ್ರಕರಣಗಳ ವಿಚಾರಣೆಯನ್ನು ಆ. 28 ಮತ್ತು 29ಕ್ಕೆ ಮುಂದೂಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ತುಮಕೂರಿನ ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಕುಣಿಗಲ್ ಮತ್ತು ಗುಬ್ಬಿ ತಾಲೂಕುಗಳಿಗೆ ಸಂಬಂಧಿಸಿದ ಪ್ರಕರಣಗಳ ವಿಚಾರಣೆಯನ್ನು ಆ. 19ಕ್ಕೆ ಮತ್ತು ತುಮಕೂರು ತಾಲೂಕಿಗೆ ಸಂಬಂಧಿಸಿದ ಬಾಕಿ ಇರುವ ಪ್ರಕರಣಗಳನ್ನು ಆ. 20ಕ್ಕೆ ಈ ಹಿಂದೆ ವಿಚಾರಣೆಗೆ ನಿಗದಿಪಡಿಸಲಾಗಿತ್ತು.