ಹಾವು ಕಚ್ಚಿ ಮಹಿಳೆ ಸಾವು
ಪಾವಗಡ: ಜಮೀನಿನಲ್ಲಿ ಕೆಲಸ ಮಾಡುತ್ತಿರುವ ಸಂದರ್ಭದಲ್ಲಿ ಮಹಿಳೆಯೊಬ್ಬರಿಗೆ ಹಾವು ಕಚ್ಚಿ ಮೃತಪಟ್ಟ ಘಟನೆ ಶುಕ್ರವಾರ ಸಂಜೆ ಮುದ್ದಗಾನಹಳ್ಳಿ ಗ್ರಾಮದಲ್ಲಿ ನಡೆದಿದೆ. ಕಾಳಮ್ಮ(55)ಎಂಬವಳೇ ಮೃತಪಟ್ಟ ದುರ್ದೈವಿ. ತಮ್ಮ ಜಮೀನಿನಲ್ಲಿ ಕಳೆ ತೆಗೆಯಲು ಹೋಗಿದ್ದಾಗ ಕಳೆಯ ಕುಪ್ಪೆಯಲ್ಲಿದ್ದ ಹಾವೊಂದು ಆಕೆಯ ಎಡಗಾಲಿಗೆ ಕಚ್ಚಿದೆ. ಕೂಡಲೇ ಸ್ಥಳೀಯರು ಆಕೆಯನ್ನು ಪಾವಗಡ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲು ತುರ್ತುವಾಹನಕ್ಕೆ ಕರೆ ಮಾಡಿದ್ದಾರೆ. ಮಾರ್ಗ ಮಧ್ಯೆ ಅಸುನೀಗಿದ್ದಾರೆ. ತಾ. ಆರಸೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಾವಗಡ ಸರ್ಕಾರಿ ಆಸ್ಪತ್ರೆಯಲ್ಲಿ ಶವ ಪರೀಕ್ಷೆ ನಡೆಸಲಾಯಿತು.