ವಿಶ್ವ ಫೋಟೋಗ್ರಾಫರ್ಗಳ ದಿನಾಚರಣೆ:ಬಡ ರೋಗಿಗಳಿಗೆ ಹಾಲು, ಬ್ರೆಡ್ ವಿತರಣೆ
ಪಾವಗಡ: ವಿಶ್ವ ಫೋಟೋ ಮತ್ತು ವಿಡಿಯೋ ಗ್ರಾಫರ್ಗಳ ದಿನಾಚರಣೆ ಅಂಗವಾಗಿ ತಾಲೂಕು ಫೋಟೋ ಹಾಗೂ ವಿಡಿಯೋ ಗ್ರಾಫರ್ ಸಂಘದ ವತಿಯಿಂದ ಸೋಮವಾರ ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಕಾರ್ಯಕ್ರಮ ಹಮ್ಮಿಕೊಂಡು ಆಸ್ಪತ್ರೆಯಲ್ಲಿ ದಾಖಲಾಗಿದ್ದ ಸುಮಾರು 500 ಮಂದಿ ಬಡ ರೋಗಿಗಳಿಗೆ ಉಚಿತ ಹಾಲು ಮತ್ತು ಬ್ರೆಡ್ ವಿತರಿಸಿದರು.
ಸಂಘದ ತಾಲೂಕು ಅಧ್ಯಕ್ಷ ಎಚ್.ತಿಮ್ಮರಾಜು ಸುಮಾರು 70ಕ್ಕಿಂತ ಹೆಚ್ಚು ಮಂದಿ ಫೋಟೋ ಮತ್ತು ವಿಡಿಯೋ ಗ್ರಾಫರ್ಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ತೆರಳುವ ಮೂಲಕ ಸಂಭ್ರಮಾಚರಣೆ ಮಾಡಿದರು. ಇದೇ ಸಂದರ್ಭದಲ್ಲಿ ಮಾತನಾಡಿದ ಅಧ್ಯಕ್ಷ ಎಚ್.ತಿಮ್ಮರಾಜು, ಫೋಟೋ ಮತ್ತು ವಿಡಿಯೋ ಗ್ರಾಫರ್ಗಳು ಆನೇಕ ಸಮಸ್ಯೆಗಳು ಎದುರಿಸುತ್ತಿದ್ದು ಗಂಬೀರವಾಗಿ ಪರಿಗಣಿಸುವ ಮೂಲಕ ಸಮಸ್ಯೆಗಳನ್ನು ನಿವಾರಿಸುವಂತೆ ಸರ್ಕಾರವನ್ನು ಒತ್ತಾಯಿಸಿದರು. ಸಂಘದ ಕಾರ್ಯದರ್ಶಿ ಚಂದ್ರಶೇಖರ್, ರಾಯಪ್ಪ ಮುಂತಾದವರು ನೇತೃತ್ವ ವಹಿಸಿದ್ದರು.