ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

25ರಂದು ಆರೋಗ್ಯ ತಪಾಸಣೆ ಶಿಬಿರ

Srinivasa Murthy VN
Updated On : 22 Aug 2013, 11:42 am

ಮಧುಗಿರಿ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತುಮಕೂರು, ಸ್ನೇಹ ಮನೋವಿಕಾಸ ಕೇಂದ್ರ, ಭಾರತೀಯ ವೈದ್ಯಕೀಯ ಸಂಘ ಹಾಗೂ ರಾಘವೇಂದ್ರ ಆಸ್ಪತ್ರೆ ಸಂಯುಕ್ತಾಶ್ರಯದಲ್ಲಿ ಆ.25 ರಂದು ಬೆ. 10.30 ರಿಂದ 2.30ರವರೆಗೆ ಮಧುಗಿರಿ ಪಟ್ಟಣದ ರಾಘವೇಂದ್ರ ಆಸ್ಪತ್ರೆ ಆವರಣದಲ್ಲಿ ಉಚಿತ ನರ ಮನೋರೋಗ, ಮದ್ಯಪಾನ ಮಾದಕ ವ್ಯಸನಿಗಳಿಗೆ ಬೃಹತ್ ಆರೋಗ್ಯ ತಪಾಸಣಾ ಶಿಬಿರ ಏರ್ಪಡಿಸಲಾಗಿದೆ ಎಂದು ಡಾ.ಲೋಕೇಶಬಾಬು ಮತ್ತು ಕಾರ್ಯದರ್ಶಿ ಡಾ. ಪದ್ಮಾಕ್ಷಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಿದ್ದರಬೆಟ್ಟ ಕ್ಷೇತ್ರದ ವೀರಭದ್ರ ಶಿವಾಚಾರ್ಯ ಸ್ವಾಮೀಜಿ, ಶಾಸಕ ರಾಜಣ್ಣ, ಡಾ. ಜಯರಾಮ್ ವಿಶೇಷ ಆಹ್ವಾನಿತರಾಗಿ ನರ ಮನೋವೈದ್ಯ ಡಾ.ಲೋಕೇಶ್ ಬಾಬು, ಡಾ. ಪ್ರಸನ್ನಕುಮಾರ್, ಸ್ಥಳೀಯ ಸಂಘ ಸಂಸ್ಥೆಗಳ ಜನ ಪ್ರತಿನಿಧಿಗಳು, ರಾಜಕೀಯ ಮುಖಂಡರು ಆಶಾ, ಅಂಗನವಾಡಿ, ಸ್ತ್ರೀಶಕ್ತಿ ಸಂಘ ಸಂಸ್ಥೆ ಮಹಿಳೆಯರು ಭಾಗವಹಿಸಲಿದ್ದಾರೆ. ಈ ನಿಟ್ಟಿನಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಶಿಬಿರದ ಪ್ರಯೋಜನ ಪಡೆದು ಕೊಳ್ಳುವಂತೆ ಡಾ.ಲೋಕೇಶ್‌ಬಾಬು ಕೋರಿದ್ದಾರೆ. ಮಾಹಿತಿಗಾಗಿ ಟಿ.ಎನ್.ಪುಟ್ಟರಾಜು ಪಿಆರ್‌ಒ ಸ್ನೇಹ ಮನೋವಿಕಾಸ ಕೇಂದ್ರ ತುಮಕೂರು ಮೊ. 9845095979 ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  

ಸಂಯೋಜಕ ಹುದ್ದೆ:   ಲಿಖಿತ ಪರೀಕ್ಷೆ
ಮಧುಗಿರಿ:
ಸಾರ್ವಜನಿಕ ಶಿಕ್ಷಣ ಇಲಾಖೆ ಬೆಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ವೃಂದದ ಶಿಕ್ಷಣ ಸಂಯೋಜಕ ಹುದ್ದೆಗಳನ್ನು ಲಿಖಿತ ಪರೀಕ್ಷೆ ನಡೆಸಿ ಆಯ್ಕೆ ಮೂಲಕ ಭರ್ತಿ ಮಾಡಲು ಆದೇಶಿಸಿರುತ್ತಾರೆ. ಅದರಂತೆ ಅರ್ಹ ಶಿಕ್ಷಕರು ಆ.26 ರ ಒಳಗಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ನೋಂದಣಿ ಮಾಡಿಕೊಳ್ಳಲು ಮತ್ತು ಹೆಚ್ಚಿನ ಮಾಹಿತಿಗೆ ಸಂಬಂಧಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಸಂಪರ್ಕಿಸಲು ಉಪ ನಿರ್ದೇಶಕ ಆಂಜನಪ್ಪ ಪ್ರಕಟಣೆಯಲ್ಲಿ ಕೋರಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement