ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ಬಿಇಓ ಕಚೇರಿ ಶಿಕ್ಷಣ ಸಂಯೋಜಕರ ಹುದ್ದೆಗಳಿಗೆ ಪರೀಕ್ಷೆ; ಅರ್ಜಿ ಆಹ್ವಾನ

Vishwanath S
Updated On : 24 Aug 2013, 1:17 am

ಚಿಕ್ಕನಾಯಕನಹಳ್ಳಿ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಖಾಲಿಯಿರುವ ಶಿಕ್ಷಣ ಸಂಯೋಜಕರ ಹುದ್ದೆಗಳಿಗೆ ಲಿಖಿತ ಪರೀಕ್ಷೆಗಳನ್ನು ನಡೆಸಲಾಗುತ್ತಿದ್ದು, ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ ಎಂದು ಕ್ಷೇತ್ರಶಿಕ್ಷಣಾಧಿಕಾರಿ ಸಾ.ಚಿ.ನಾಗೇಶ್ ತಿಳಿಸಿದ್ದಾರೆ.
ಈ ಸಂಬಂದ ಪತ್ರಿಕಾ ಹೇಳಿಕೆ ನೀಡಿರುವ ಅವರು ಕಚೇರಿಯಲ್ಲಿ ಖಾಲಿಯಿರುವ ಪ್ರಾಥಮಿಕ ಮತ್ತು ಪ್ರೌಢಶಾಲಾ ವೃಂದದ ಶಿಕ್ಷಣ ಸಂಯೋಜಕರ ಹುದ್ದೆಗಳನ್ನು ಲಿಖಿತ ಪರೀಕ್ಷೆ ಮೂಲಕ ಆಯ್ಕೆ ಮಾಡಿ ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಈ ಕೆಳಕಂಡ ಅರ್ಹತೆಯನ್ನು ಹೊಂದಿರಬೇಕಾದ್ದು ಕಡ್ಡಾಯವಾಗಿದೆ.
ಅರ್ಹತೆಗಳು: ಸರ್ಕಾರಿ ಪ್ರೌಢಶಾಲಾ ಕಲಾ, ವಿಜ್ಞಾನ, ಭಾಷಾ ಸಹಶಿಕ್ಷಕ ವೃಂದದ ಶಿಕ್ಷಕರು ಹಾಗೂ ಪ್ರಾಥಮಿಕ ಶಾಲಾ ಪದವೀಧರೇತರ ಬಡ್ತಿ ಮುಖ್ಯ ಶಿಕ್ಷಕರು ಪರೀಕ್ಷೆಗೆ ನೋಂದಾಯಿಸಲು ಅರ್ಹರಾಗಿರುತ್ತಾರೆ.
ಪ್ರೌಢಶಾಲಾ ವೃಂದದವರು ಕನಿಷ್ಠ 10 ವರ್ಷ ಸಹ ಶಿಕ್ಷಕರಾಗಿ ಸೇವಾ ಅನುಭವವಿರಬೇಕು. ಅರ್ಜಿ ಸಲ್ಲಿಕೆ ದಿನಾಂಕಕ್ಕೆ 50ವರ್ಷ ವಯೋವುತಿಯೊಳಗಿರಬೇಕು. ಈಗಾಗಲೇ ಶಿಕ್ಷಣ ಸಂಯೋಜಕರಾಗಿ 5ವರ್ಷ ಸೇವೆ ಪೂರ್ಣಗೊಳಿಸಿ ಪದವೀಧರೇತರ ಮುಖ್ಯಶಿಕ್ಷಕರಾಗಿ ಮತ್ತು ಪ್ರೌಢಶಾಲಾ ಸಹ ಶಿಕ್ಷಕರಾಗಿ ಹಿಂದಿರುಗಿದವರು ಮತ್ತೆ ಬೋಧನಾ ಕಾರ್ಯದಲ್ಲಿ ಕನಿಷ್ಠ 5 ವರ್ಷ ಸೇವೆ ಸಲ್ಲಿಸಿರಬೇಕು.
ಪ್ರಸ್ತುತ ಕರ್ತವ್ಯ ನಿರ್ವಹಿಸುತ್ತಿರುವ 5 ವರ್ಷ ಪೂರ್ಣಗೊಳಿಸಿರುವ ಹಾಗೂ ಪರೀಕ್ಷೆ ಮೂಲಕ ಆಯ್ಕೆಯಾಗದೇ ವರ್ಗಾವಣೆ  ಅಥವಾ ಬಡ್ತಿ ಮೂಲಕ ಬಂದಿರುವ ಶಿಕ್ಷಣ ಸಂಯೋಜಕರು ಕೂಡ ಅರ್ಜಿ ಸಲ್ಲಿಸಿ ಪರೀಕ್ಷೆ ಮೂಲಕ ಆಯ್ಕೆಯಾಗಬೇಕಾಗುತ್ತದೆ.
ಆಸಕ್ತ ಶಿಕ್ಷಕರು 2013, ಆಗಸ್ಟ್, 26ರೊಳಗೆ ಕ್ಷೇತ್ರಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ನಿಗದಿತ ನಮೂನೆಯಲ್ಲಿ ತಮ್ಮ ಹೆಸರನ್ನು ನೋಂದಣಿ ಮಾಡಿಕೊಳ್ಳಲು ತಿಳಿಸಿದೆ. ತಡವಾಗಿ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಕ್ಷೇತ್ರಶಿಕ್ಷಣಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಿ ಪಡೆಯಬಹುದು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement