ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ಶಿರಾ ದೊಡ್ಡಕೆರೆಗೆ ಸಚಿವರ ಭೇಟಿ

Srinivasa Murthy VN
Updated On : 27 Aug 2013, 11:30 am

ತುಮಕೂರು: ಶಿರಾ ನಗರಕ್ಕೆ ಕುಡಿಯುವ ನೀರು ಒದಗಿಸುವ ದೊಡ್ಡಕೆರೆಗೆ ಜಿಲ್ಲಾ ಉಸ್ತುವಾರಿ ಸಚಿವ ಟಿ.ಬಿ.ಜಯಚಂದ್ರ ಅವರು ಭೇಟಿ ನೀಡಿದ್ದರು.  ಶಿರಾ ಪ್ರದೇಶದಲ್ಲಿ ಮಳೆ ಇಲ್ಲದೆ ಕುಡಿಯುವ ನೀರಿಗೆ ತೀವ್ರ ತೊಂದರೆಯಾಗಿದ್ದು, ಈ ಸಂದರ್ಭ ದೊಡ್ಡಕೆರೆಗೆ ನೀರು ಹರಿಸಲಾಗುತ್ತಿರುವುದರಿಂದ ಕುಡಿಯುವ ನೀರಿಗೆ ಸಮಸ್ಯೆ ಎದುರಾಗುವುದಿಲ್ಲ ಎಂದು ತಿಳಿಸಿದ ಸಚಿವರು, ಇದೇ ಸಂದರ್ಭ  ದೊಡ್ಡಕೆರೆಗೆ ಪುಷ್ಪ ಅರ್ಪಿಸಿ, ನಮನ ಸಲ್ಲಿಸಿದರು. ಇದೇ ಸಂದರ್ಭ ಸಚಿವರು ದೊಡ್ಡಕೆರೆಯ  ನೀರು ಶುದ್ಧೀಕರಣ ಘಟಕಕ್ಕೆ ಭೇಟಿ ನೀಡಿ ಯಂತ್ರೋಪಕರಣಗಳನ್ನು ಪರಿಶೀಲಿಸಿದರು.

ಕುಮಾರಸ್ವಾಮಿ ರಾಜಿನಾಮೆ ನೀಡಕೂಡದು: ಮಾಜಿ ಸಚಿವ
ಶಿರಾ: ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರ ಸ್ವಾಮಿ ಅವರು ಯಾವ ಹುದ್ದೆಗೂ ರಾಜಿನಾಮೆ ಕೊಡಬಾರದೆಂದು  ಜೆಡಿಎಸ್ ಮುಖಂಡ ಮಾಜಿ ಸಚಿವ ಬಿ.ಸತ್ಯನಾರಾಯಣ ತಿಳಿಸಿದ್ದಾರೆ.
ನಾವೆಲ್ಲಾ ಎಚ್.ಡಿ.ಕೆ. ಜೊತೆಗೆ ಇದ್ದೇವೆ. ಜನತೆಯ ತೀರ್ಪಿಗೆ ನಾವು ತಲೆಬಾಗುತ್ತೇವೆ. ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಪಕ್ಷವನ್ನು ಸಂಘಟಿಸುತ್ತೇವೆ. ಆದರೆ ಯಾವುದೇ ಕಾರಣಕ್ಕೂ ಎಚ್.ಡಿ.ಕುಮಾರ ಸ್ವಾಮಿ ಅವರು ಯಾವುದೇ ಹುದ್ದೆಗೆ ರಾಜಿನಾಮೆ ನೀಡಬಾರದು ಎಂದರು.  ರಾಜ್ಯದಲ್ಲಿ ಪ್ರತಿಷ್ಠೆಯ ಕಣವಾಗಿ ಮಾರ್ಡಟ್ಟಿದ್ದ ಲೋಕಸಭಾ ಉಪಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಮತ್ತು ಮಂಡ್ಯ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ವಿಜಯ ಸಾಧಿಸಿದ್ದಾರೆ. ಜೆ.ಡಿ.ಎಸ್. ಭದ್ರಕೋಟೆ ಎಂದೇ ಬಿಂಬಿತವಾಗಿದ್ದ ಬೆಂಗಳೂರು ಗ್ರಾಮಾಂತರ ಜಿಲ್ಲೆ ಕೂಡ ಇದೀಗ ಕೈ ವಶವಾಗಿದೆ. ಈ ಹಿನ್ನೆಲೆಯಲ್ಲಿ ಪಕ್ಷದ ಸೋಲಿನ ಹೊಣೆ ಹೊತ್ತು ಜೆ.ಡಿ.ಎಸ್. ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರ ಸ್ವಾಮಿ   ತಮ್ಮ ಸ್ಥಾನಕ್ಕೆ  ರಾಜಿನಾಮೆ ನೀಡಲು ನಿರ್ಧರಿಸಿದ್ದರು. ಆದರೆ ಕುಮಾರಸ್ವಾಮಿ ರವರು ತಮ್ಮ ನಿರ್ಧಾರದಿಂದ ಹಿಂದೆ ಸರಿಯಬೇಕು. ಮುಂದಿನ ದಿನಗಳಲ್ಲಿ ಪಕ್ಷವನ್ನು ಉತ್ತಮ ರೀತಿಯಲ್ಲಿ ಸಂಘಟಿಸುತ್ತೇವೆ. ಈ ಸಂಬಂಧ ಕುಮಾರಸ್ವಾಮಿ  ಮನವೊಲಿಸಲು ನಿಯೋಗ ಕರೆದುಕೊಂಡು ಹೋಗುವುದಾಗಿ ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement