ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ಕೆನರಾ ಬ್ಯಾಂಕ್ ಎಲ್ಲಾ ವರ್ಗದ ಜನರ ಅಭಿವೃದ್ಧಿಗೆ ಶ್ರಮಿಸುತ್ತಿದೆ: ಕುರ್ತುಕೋಟಿ

Srinivasa Murthy VN
Updated On : 29 Aug 2013, 11:55 am

ಶಿರಾ:  ವಿದ್ಯಾಸಾಲ, ಕೃಷಿ ಸಾಲ, ಗೃಹ ಸಾಲ, ಕೈಗಾರಿಕಾ ಸಾಲ ಇನ್ನೂ ಹಲವು ಸೌಲಭ್ಯಗಳನ್ನು ಜನತೆಗೆ ನೀಡುವ ಮೂಲಕ ಕೆನರಾ ಬ್ಯಾಂಕ್ ದೇಶದ ಎಲ್ಲಾ ವರ್ಗದ ಜನರ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತಿದೆ ಎಂದು ಕೆನರಾ ಬ್ಯಾಂಕ್ ರಾಜ್ಯ ಉಪ ಮಹಾ ಪ್ರಬಂಧಕ ಕುರ್ತುಕೋಟಿ ಅವರು ತಿಳಿಸಿದರು.
ಅವರು ನಗರದ ಕೆನರಾ ಬ್ಯಾಂಕ್ ಶಾಖೆಯಲ್ಲಿ ಕೆನರಾ ಬ್ಯಾಂಕ್ ಆರ್ಥಿಕ ಸಾಕ್ಷರತಾ ಕೇಂದ್ರವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ಗ್ರಾಮಾಂತರ ಪ್ರದೇಶಗಳಿಗೆ ಬ್ಯಾಂಕ್‌ನ ಸಾಲ ಸೌಲಭ್ಯಗಳ ಬಗ್ಗೆ ವಿವರಿಸಿದ ಅವರು ಬ್ಯಾಂಕುಗಳಲ್ಲಿ ಸಾಲವನ್ನು ಪಡೆಯುವುದು ಗ್ರಾಹಕನ ಆದ್ಯ ಕರ್ತವ್ಯ ಮತ್ತು ಪಡೆದ ಸಾಲವನ್ನು ಸಕಾಲದಲ್ಲಿ ಮರುಪಾವತಿ ಮಾಡಿ ಬ್ಯಾಂಕಿನ ಏಳಿಗೆಗೆ ಸಹಕರಿಸಬೇಕು ಎಂದರು. ಮುಖ್ಯ ಅತಿಥಿಗಳಾಗಿ ತುಮಕೂರು ಕೆನರಾ ಬ್ಯಾಂಕ್ ಚೀಫ್ ಮ್ಯಾನೆಜರ್ ಎನ್.ಜಯರಾಮಯ್ಯ ಮಾತನಾಡಿ ಆರ್ಥಿಕ ಸೇರ್ಪಡೆ ಯೋಜನೆಯಲ್ಲಿ ಗ್ರಾಮಾಂತರ ಪ್ರದೇಶಗಳಲ್ಲಿ ಇನ್ನೂ ಹೆಚ್ಚಿನ ಶಾಖೆಗಳನ್ನು ಪ್ರಾರಂಭಿಸುತ್ತೇವೆ ಎಂದರು. ಶಿರಾ ಕೆನರಾ ಬ್ಯಾಂಕ್ ಶಾಖೆ ಮ್ಯಾನೇಜರ್ ಭಾರತೀ ಪಾಟೀಲ್, ಆರ್ಥಿಕ ಸಲಹೆಗಾರ ಕೆ.ವಿ. ಉದಯಬಾನು, ಉಪ ಮಹಾ ಪ್ರಬಂಧಕ ಡಾ.ಎಂ.ರೆಡ್ಡಯ್ಯ, ಕಾರ್ಯಕ್ರಮದಲ್ಲಿ ಬ್ಯಾಂಕಿನ ಸೇವೆಗಳ ಬಗ್ಗೆ ಮಾತನಾಡಿದರು.
ಪ್ರಾರಂಭದಲ್ಲಿ ಕುಮಾರಿ ಕಾವ್ಯ ಪ್ರಾರ್ಥಿಸಿ, ಕೆ.ವಿ.ಉದಯ ಬಾನು ಸ್ವಾಗತಿಸಿ, ದೇವರಾಜು ನಿರೂಪಿಸಿ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement