ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ವಿದ್ಯಾರ್ಥಿಗಳು ಶಿಕ್ಷಣ ಮೌಲ್ಯ ಅರಿಯಲಿ: ಪ್ರೊ. ಕುಸುಮಾ

Vishwanath S
Updated On : 31 Aug 2013, 12:23 pm

ಗುಬ್ಬಿ: ಇಂದಿನ ವಿದ್ಯಾರ್ಥಿಗಳು ಜೀವನ ಮೌಲ್ಯ ಜೊತೆಗೆ ಶಿಕ್ಷಣ ಮೌಲ್ಯಗಳನ್ನು ಅರಿತಾಗ ಮಾತ್ರ ಆದರ್ಶ ವಿದ್ಯಾರ್ಥಿಗಳಾಗಲು ಸಾಧ್ಯ ಎಂದು ಪ್ರಾಚಾರ್ಯ ಪ್ರೊ. ಕುಸುಮಾ ತಿಳಿಸಿದರು.
ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಮಾಜ ಶಾಸ್ತ್ರವಿಭಾಗದಿಂದ ಏರ್ಪಡಿಸಿದ್ದ ಸಮಾಜವಾದ ಕುರಿತ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದ ಅವರು ಶಿಕ್ಷಣದ ಜೊತೆಗೆ ಸಾಮಾಜಿಕ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕಾದ ತತ್ವ ಮತ್ತು ಸಿದ್ಧಾಂತಗಳನ್ನು ಅಳವಡಿಸಿಕೊಂಡಾಗ ಉತ್ತಮ ಸಮಾಜ ನಿರ್ಮಾಣ ಮಾಡಲು ಸಾದ್ಯವಾಗುತ್ತದೆ ಎಂದರು.
ಸಮಾಜದ ಜವಾಬ್ದಾರಿಗಳು, ಸಾಮಾಜಿಕ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕಾದ ಆದರ್ಶಗಳು ಹಾಗೂ ಸಾಮಾಜಿಕ ಜವಾಬ್ದಾರಿಗಳನ್ನು ಯುವ ಜನಾಂಗ ತಮ್ಮ ಬದುಕಿನಲ್ಲಿ ರೂಢಿಸಿಕೊಂಡಾಗ ಮಾತ್ರ ಆದರ್ಶವ್ಯಕ್ತಿಗಳಾಗಿ ರೂಪುಗೊಳ್ಳಲು ಸಾಧ್ಯವಾಗುತ್ತದೆ ಎಂದ ಅವರು ಪ್ರತಿಯೊಬ್ಬರು ಸಮಾಜವಾದದ ಮೌಲ್ಯಗಳನ್ನು ಬೆಳಸಿಕೊಂಡು ತಮ್ಮ ಬದುಕನ್ನು ಹಸನು ಮಾಡಿಕೊಳ್ಳುವಂತೆ ತಿಳಿಸಿದರು.
ಸಮಾಜ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪರ್ತಾಪುರ್ ಮಾತನಾಡಿ ವಿದ್ಯಾರ್ಥಿಗಳು ಸಾಮಾಜಿಕ ಜವಾಬ್ದಾರಿಗಳ ಜೊತೆಗೆ ಸಮಾಜದ ಸರ್ವಾಂಗೀಣ ಏಳ್ಗೆಗೆ ಪೂರಕವಾದ ಚಿಂತನೆಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡಾಗ ಮಾತ್ರ ಉತ್ತಮ ಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement