ಸುಗುಮ ಬಸ್ ಸಂಚಾರಕ್ಕೆ ಆಗ್ರಹಿಸಿ: ಬೀದಿಗಿಳಿದ ಮಕ್ಕಳು
ಕೊರಟಗೆರೆ: ತಾಲೂಕಿನ ವಿವಿಧ ಗ್ರಾಮಗಳಲ್ಲಿ ಶಾಲೆಗಳಿಗೆ ಬರಲು ಮತ್ತು ವಾಪಸ್ ಹೋಗಲು ಕೆಎಸ್ಆರ್ಟಿಸಿ ಹೆಚ್ಚುವರಿ ಬಸ್ಗಾಗಿ ಮತ್ತು ಹಾಲಿ ಇರುವ ಬಸ್ಗಳನ್ನು ನಿಗದಿತ ಸ್ಥಳಗಳಲ್ಲಿ ನಿಲ್ಲಿಸುವಂತೆ ಒತ್ತಾಯಿಸಿ ಶಾಲಾ ವಿದ್ಯಾರ್ಥಿಗಳು ದಿಢೀರ್ ರಸ್ತೆ ತಡೆ ನಡೆಸಿದರು. ಗೌರಿಬಿದನೂರಿನಿಂದ ಕೊರಟಗೆರೆ ಮಾರ್ಗವಾಗಿ ತುಮಕೂರಿಗೆ ಸಂಚರಿಸುವ ಕೆಎಸ್ಆರ್ಟಿಸಿ ಬಸ್ಗಳು ತಾಲೂಕಿನ ಬೈಚಾಪುರ, ಅಕ್ಕಿರಾಂಪುರ ಹೊಸಹಳ್ಳಿ, ಹೊಳವನಹಳ್ಳಿ, ಹುಲಿಕುಂಟೆ ಗ್ರಾಮಗಳ ಮುಖಾಂತರ ಹಾದು ಹೋಗುತ್ತಿವೆ. ಸದರಿ ಬಸ್ಗಳು ಪ್ರತಿನಿತ್ಯ ಕೊರಟಗೆರೆಯ ಕಾಲೇಜುಗಳಿಗೆ ಆಗಮಿಸುವ ನೂರಾರು ವಿದ್ಯಾರ್ಥಿಗಳಿಗೆ ಬಸ್ ಪಾಸ್ ವಿತರಿಸಿದ್ದು ಆದರೆ ಈ ಭಾಗದ ಗ್ರಾಮಗಳಲ್ಲಿ ಬಸ್ ನಿಲುಗಡೆ ಮಾಡದೆ ವಿದ್ಯಾರ್ಥಿಗಳಿಗೆ ಅನಾನುಕೂಲ ಉಂಟು ಮಾಡುತ್ತಿದ್ದು ಈ ಬಗ್ಗೆ ಬೇಸತ್ತ ವಿದ್ಯಾರ್ಥಿಗಳು ಕೊರಟಗೆರೆ ಪಟ್ಟಣದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ದಿಢೀರ್ ರಸ್ತೆ ತಡೆ ನಡೆಸಿದರು. ವಿಷಯ ತಿಳಿದ ತಹಶೀಲ್ದಾರ್ ರಾಮಚಂದ್ರಪ್ಪ ಮತ್ತು ಇನ್ಸ್ಪೆಕ್ಟರ್ ಚಂದ್ರಶೇಖರ್ ಸ್ಥಳಕ್ಕೆ ಆಗಮಿಸಿ ವಿದ್ಯಾರ್ಥಿಗಳಿಂದ ಮನವಿ ಸ್ವೀಕರಿಸಿ ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಸಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ ನಂತರ ರಸ್ತೆ ತೆರೆವುಗೊಳಿಸಿದರು.